News Karnataka Kannada
Sunday, May 05 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 8,822 ಹೊಸ ಕೋವಿಡ್ ಪ್ರಕರಣ ಪತ್ತೆ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 201 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
Photo Credit : IANS

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಕೆಯಾಗಿದೆ. ದೇಶದಲ್ಲಿ ಬುಧವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,822 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,45,517ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,792ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 5,718 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,67,088ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,40,278 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,58,71,030 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,95,50,87,271 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು