News Karnataka Kannada
Monday, April 15 2024
Cricket
ದೆಹಲಿ

ತಮ್ಮ ಮೂರನೇ ಅವಧಿಯಲ್ಲಿ ಭಾರತ ಮೂರನೇ ದೊಡ್ಡ ಆರ್ಥಿಕತೆಯಾಗುವ ಬಗ್ಗೆ ಮೋದಿ ಭರವಸೆ

ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದರೆ ಭಾರತ ವಿಶ್ವದಲ್ಲೇ ಮೂರನೇ ದೊಡ್ಡ ಆರ್ಥಿಕತೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Photo Credit : News Kannada

ನವದೆಹಲಿ: ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದರೆ ಭಾರತ ವಿಶ್ವದಲ್ಲೇ ಮೂರನೇ ದೊಡ್ಡ ಆರ್ಥಿಕತೆಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ವೇಳೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್‌ನವರು 11ನೇ ಸ್ಥಾನಕ್ಕೆ ಹೆಮ್ಮ ಪಡುತ್ತಿದ್ದಾರೆ. ನಾವು ಐದನೇ ಸ್ಥಾನಕ್ಕೆ ಬಂದಿದ್ದೇವೆ. ಆಗ ಖುಷಿ ಪಡುತ್ತಿದ್ದವರು ಈಗಲೂ ಪಡಬೇಕು ಎಂದಿದ್ದಾರೆ.

ಪ್ರಸ್ತುತ ಐದನೇ ದೊಡ್ಡ ಆರ್ಥಿಕತೆಯಾಗಿರುವ ಭಾರತ, ಬರುವ ೩೦ ವರ್ಷಗಳಲ್ಲಿ ಮೂರನೇ ಸ್ಥಾನಕ್ಕೇರಲಿದೆ ಎಂದು ಅವರು ಭಾವಿಸಿದ್ದಾರೆ. ಆದರೆ ನಾವು ಅಷ್ಟು ದೀರ್ಘಾವಧಿ ಕಾಯದೆ, ನಮ್ಮ ಮೂರನೇ ಅವಧಿಯಲ್ಲಿಯೇ ಆ ಗುರಿ ತಲುಪಲಿದ್ದೇವೆ. ಇದು ಮೋದಿಯ ಗ್ಯಾರೆಂಟಿ ಎಂದು ಅವರು ಘೋಷಿಸಿದ್ದಾರೆ.

ತಮ್ಮ ಸರ್ಕಾರದ ಜನಪರ ಕೆಲಸಗಳನ್ನು ಉಲ್ಲೇಖಿಸಿದ ಮೋದಿ, ಕಾಂಗ್ರೆಸ್ಸ್‌ಗೆ ಇಷ್ಟು ಕೆಲಸ ಮಾಡಲು ೧೦೦ ವರ್ಷ ಬೇಕಿತ್ತು ಎಂದು ಟೀಕೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು