ನವದೆಹಲಿ: 2027 ರ ವೇಳೆಗೆ ಭಾರತವು ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ (ನ. 15) ಹೇಳಿದ್ದಾರೆ.
ಇಂಡೋ–ಪೆಸಿಫಿಕ್ ಪ್ರಾದೇಶಿಕ ಸಂವಾದವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಆರ್ಥೀಕತೆಯು ಸರಿಯಾದ ಹಾದಿಯಲ್ಲಿ ಸಾಗುತ್ತಿದೆ. ಈ ವರ್ಷದೇಶದ ಆರ್ಥಿಕತೆ ಬೆಳವಣಿಗೆಯಲ್ಲಿ ಶೇ.೭ಕ್ಕಿಂತಲೂ ಕಡಿಮೆ ಇದೆ ಎಂದು ಅಂದಾಜು ಮಾಡಲಾಗಿದೆ ಎಂದು ತಿಳಿಸಿದ್ದಾರೆ.