Categories: ದೆಹಲಿ

ವಿದೇಶಿ ಹೂಡಿಕೆಯನ್ನು ಸ್ವಾಗತಿಸುತ್ತೇವೆ, ಸ್ಥಳಿಯರಿಗೆ ಉದ್ಯೋಗಾವಕಾಶವನ್ನು ಬೆಂಬಲಿಸುತ್ತೇವೆ: ಮೋದಿ

ನವದೆಹಲಿ: ವಿದೇಶಿ ಹೂಡಿಕೆಯನ್ನು ಸ್ವಾಗತಿಸುವ ಭಾರತ, ದೇಶದಲ್ಲಿ ತಯಾರಾದ ಪ್ರತಿ ವಸ್ತುವಿನಲ್ಲಿ ಇಲ್ಲಿನ ಮಣ್ಣಿನ ಸೊಗಡನ್ನು ಕಾಣಲು ಬಯಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ʼಭಾರತದಲ್ಲಿ ವಿದೇಶಿಗರು ಹೂಡಿಕೆ ಮಾಡಬೇಕೆಂದು ನಾನು ಬಯಸುತ್ತೇನೆ. ಆ ಹೂಡಿಕೆದಾರರು ಇಲ್ಲಿನ ಜನರಿಗೆ ಉದ್ಯೋಗ ಕಲ್ಪಸುವಂತಿರಬೇಕು. ಹೀಗಾದರೆ ಭಾರತೀಯ ಯುವಕರಿಗೆ ಉದ್ಯೋಗಾವಕಾಶಗಳು ಲಭಿಸುತ್ತವೆʼ ಎಂದು ಪ್ರಧಾನಿ, ಎಲಾನ್‌ ಮಸ್ಕ್‌ರ ಟೆಸ್ಲಾ ಹಾಗು ಸ್ಟಾರ್‌ಲಿಂಕ್‌ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು.

ಈ ಸಂದರ್ಭದಲ್ಲಿ ೨೦೧೫ರಲ್ಲಿ ಮಸ್ಕ್‌ರ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭವನ್ನು ನೆನಪಿಸಿಕೊಂಡ ಅವರು, ಅದಕ್ಕಾಗಿ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರು ನನ್ನನ್ನು ಭೇಟಿ ಮಾಡಿದರು ಎಂದರು.

ಟೆಸ್ಲಾದ ಎಕ್ಸ್‌ ಪೋಸ್ಟ್‌ ಪ್ರಕಾರ ಮಸ್ಕ್‌ ಈ ತಿಂಗಳು ಮೋದಿಯನ್ನು ಭೇಟಿಯಾಗಲಿದ್ದು, ಭಾರತದಲ್ಲಿ ಅತಿ ದೊಡ್ಡ ಹೂಡಿಯನ್ನು ಘೋಷಿಸುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ʼಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತ ಅನ್ಯ ದೇಶಗಳಂತೆ ವಿದ್ಯುತ್‌ ಚಾಲಿತ ವಾಹನಗಳನ್ನು ಹೊಂದುವುದು ಅಗತ್ಯʼ ಎಂದ ಮಸ್ಕ್‌, ಟೆಸ್ಲಾ ಭಾರತಕ್ಕೆ ಕಾಲಿಡುವ ಸೂಚನೆ ನೀಡಿದ್ದರು.

Maithri S

Recent Posts

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ರಘುಪತಿ ಭಟ್ ನಾಮಪತ್ರ ಸಲ್ಲಿಕೆ

ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ…

8 mins ago

ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿದ ಸಯಾಮಿ ಅವಳಿ ಮಕ್ಕಳಿಗೆ ಜನ್ಮ

ಒಂದು ದೇಹ ಎರು ಜೀವ ಎಂಬಂತೆ ಮಹಿಳೆಯೊಬ್ಬರು ಮೂರು ಕಾಲು, ನಾಲ್ಕು ಕೈ ಹಾಗೂ ಒಂದು ಶಿಶ್ನವನ್ನು ಹೊಂದಿರುವ ಸಯಾಮಿ…

19 mins ago

ಕೋವಿಶೀಲ್ಡ್ ನಂತೆ ‘ಕೋವ್ಯಾಕ್ಸಿನ್’ ಕೂಡ ಅಡ್ಡಪರಿಣಾಮಗಳನ್ನು ಹೊಂದಿದೆ: ವರದಿ

ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ…

29 mins ago

ಹಾವುಗಳ ರಕ್ಷಣೆಗೆ ಸಹಾಯವಾಣಿ ಬಿಡುಗಡೆ ಮಾಡಿದ ಬೆಂಗಳೂರು ಮಹಾನಗರ ಪಾಲಿಕೆ

ಹಾವುಗಳ ರಕ್ಷಣೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಡಿಐಪಿಆರ್‌ ಕರ್ನಾಟಕ ಎಕ್ಸ್‌ ಖಾತೆಯಲ್ಲಿ…

38 mins ago

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಪ್ರಾರಂಭ

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

52 mins ago

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ‌ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

75 ವರ್ಷಕ್ಕೆ ಸಕ್ರಿಯ ರಾಜಕಾರಣದಿಂದ ಬಿಜೆಪಿಯ ಅನೇಕ ಮುಖಂಡರಿಗೆ ನಿವೃತ್ತಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಂದಿನ ವರ್ಷ 75 ತುಂಬುತ್ತದೆ.…

1 hour ago