News Karnataka Kannada
Saturday, May 04 2024
ದೆಹಲಿ

ದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ನಾಮಪತ್ರ ಸಲ್ಲಿಕೆ

Jagdeep Dhankar files nomination as NDA's candidate for Vice Presidential election
Photo Credit : Twitter

ದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಜಗದೀಪ್ ಧನಕರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನಾಂಕವಾಗಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು