Categories: ದೆಹಲಿ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಎಚ್‌ಸಿಎಲ್‌ ಟೆಕ್‌ನಿಂದ ಫ್ರೆಶರ್‌ಗಳಿಗರ ಅವಕಾಶ

ನವದೆಹಲಿ: ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ.

“24ರ ಹಣಕಾಸು ವರ್ಷದಲ್ಲಿ ನಾವು ಸುಮಾರು 15,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಈಗಾಗಲೇ 12,000ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆʼʼ ಎಂದು ಎಚ್‌ಸಿಎಲ್‌ ಟೆಕ್‌ನ ಮುಖ್ಯ ಪೀಪಲ್ ಆಫೀಸರ್ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈ ಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್‌ 3,096 ಪ್ರೆಶರ್‌ಗಳನ್ನು ನೇಮಿಸಿದೆ. ಜತೆಗೆ ಕಂಪನಿಯು 2024ರ ಸಂಪೂರ್ಣ ಹಣಕಾಸು ವರ್ಷದಲ್ಲಿ 12,141 ಪ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ನಾಲ್ಕನೇ ತ್ರೈಮಾಸಿಕದ ವೇಳೆಗೆ ಅದರ ಒಟ್ಟು ಉದ್ಯೋಗಿಗಳ ಸಂಖ್ಯೆ 2,27,481ಕ್ಕೆ ತಲುಪಿದೆ.

”ಮುಂಬರುವ ವರ್ಷದಲ್ಲಿ ನೇಮಕಾತಿಯು ಇದೇ ರೀತಿಯಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ 10,000ಕ್ಕೂ ಹೆಚ್ಚು ಮಂದಿಯನ್ನು ನಿಯೋಜಿಸಲು ಯೋಜನೆ ಹಾಕಿಕೊಂಡಿದ್ದೇವೆ. ಅಂದರೆ ನಾವು ಕ್ಯಾಂಪಸ್ ಮೂಲಕ ನೇಮಕಾತಿ ಮುಂದುವರಿಸುತ್ತೇವೆ” ಎಂದು ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.

 

Nisarga K

Recent Posts

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

13 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

18 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

44 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

47 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

1 hour ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago