Categories: ದೆಹಲಿ

ಲೈಂಗಿಕ ಕಿರುಕುಳಕ್ಕೆ ಬೇಸತ್ತುಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ನ್ಯಾಯಾಧೀಶೆ

ನವದೆಹಲಿ: ದೇಶ ಎಷ್ಟೇ ಮುಂದುವರಿದಿದ್ದರು ಎಷ್ಟೇ ಗಂಡು ಹೆಣ್ಣಿನ ಸಮಾನತೆ ಸಾರುತಿದ್ದರೂ ಹೆಣ್ಣಿನ ಮೇಲಿನ ಲೈಂಗಿಕ ಶೋಷಣೆ ಮಾತ್ರ ಕಡಿಮೆಯಾಗಿಲ್ಲ ಆಕೆ ಯಾವುದೇ ವೃತಿಯಲ್ಲಿದ್ದರು ಸರಿಯೇ.ಇದಕ್ಕೊಂದು ಉದಾಹರಣೆ ಎಂಬಂತೆ  ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರೊಬ್ಬರು, ಹಿರಿಯ ನ್ಯಾಯಾಧೀಶರ ವಿರುದ್ಧ ಲೈಂಗಿಕ ಕಿರುಕುಳ  ನೀಡಿರುವ  ಆರೋಪ ಮಾಡಿದ್ದಾರೆ.

ಈ ಕುರಿತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಅವರಿಗೆ ಪತ್ರ ಬರೆದಿರುವ ಸಂತ್ರಸ್ತೆ, ನನ್ನ ಜೀವನ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿ ಕೊಡಿ. ನನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಕಸದಂತೆ ನಡೆಸಿಕೊಳ್ಳಲಾಗಿದೆ. ನಾನು ಬೇಡದ ಕೀಟದಂತೆ ಭಾವಿಸುತ್ತೇನೆ ಎಂದು ಪತ್ರದಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪ್ರಕರಣ ಸಂಬಂಧ ವರದಿ ಕೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂಚನೆ ಮೇರೆಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ. ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ಇಂದು ಬೆಳಗ್ಗೆ ವರದಿಯನ್ನು ಕೇಳಿದ್ದಾರೆ.

ಜುಲೈ 2023 ರಲ್ಲಿ ಹೈಕೋರ್ಟ್‌ನ ಆಂತರಿಕ ದೂರುಗಳ ಸಮಿತಿಗೆ ದೂರು ಸಲ್ಲಿಸಿದ ನಂತರ ತನ್ನ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ನ್ಯಾಯಾಧೀಶರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಆದರೆ ವಿಚಾರಣೆ ಪ್ರಹಸನದಂತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಯುತ ತನಿಖೆ ಖಚಿತಪಡಿಸಿಕೊಳ್ಳಲು ವಿಚಾರಣೆಯ ತಪ್ಪಿತಸ್ಥ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವಂತೆ ತಾನು ವಿನಂತಿಸಿದ್ದೆ. ಆದರೆ ಸುಪ್ರೀಂ ಕೋರ್ಟ್ ನನ್ನ ಅರ್ಜಿಯನ್ನು ಕೇವಲ ಎಂಟು ಸೆಕೆಂಡುಗಳಲ್ಲಿ ವಜಾಗೊಳಿಸಿದೆ ಎಂದು ತಿಳಿಸಿದ್ದಾರೆ.

ನನಗೆ ಇನ್ನು ಬದುಕುವ ಇಚ್ಛೆ ಇಲ್ಲ. ಇನ್ನು ಮುಂದೆ ಈ ನಿರ್ಜೀವ ದೇಹವನ್ನು ಹೊತ್ತುಕೊಂಡು ಹೋಗುವುದರಲ್ಲಿ ಯಾವುದೇ ಉದ್ದೇಶವಿಲ್ಲ. ನನ್ನ ಜೀವನದಲ್ಲಿ ಯಾವುದೇ ಆಸಕ್ತಿ ಉಳಿದಿಲ್ಲ ಎಂದು ಎರಡು ಪುಟಗಳ ಪತ್ರದಲ್ಲಿ ಮಹಿಳಾ ನ್ಯಾಯಾಧೀಶೆ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿ ತಮ್ಮ ನೋವು ತೋಡಿಕೊಂಡು ತಮ್ಮ ದುಃಖವನ್ನು ಹೊರಹಾಕಿದ್ದಾರೆ.  ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Ashika S

Recent Posts

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

5 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

17 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

23 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

38 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

55 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

1 hour ago