ದೆಹಲಿ

ಹೊಸದಿಲ್ಲಿ: ಕಟ್ಟಡ ನಿರ್ಮಾಣ ಕಾಮಗಾರಿ ನಿಷೇಧ, ಕಾರ್ಮಿಕರಿಗೆ ನೆರವು ಘೋಷಿಸಿದ ಕೇಜ್ರಿವಾಲ್

ಹೊಸದಿಲ್ಲಿ: ಕಟ್ಟಡ ನಿರ್ಮಾಣ ಚಟುವಟಿಕೆಗಳ ಮೇಲಿನ ನಿಷೇಧದ ನಡುವೆ ಕಾರ್ಮಿಕರಿಗೆ ತಿಂಗಳಿಗೆ 5,000 ರೂ.ಗಳ ಆರ್ಥಿಕ ನೆರವು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಕಾರ್ಮಿಕ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ನಿರ್ದೇಶನ ನೀಡಿದ್ದಾರೆ.

ರಾಜಧಾನಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ನಡುವೆ, ದೆಹಲಿ ಸರ್ಕಾರವು ಭಾನುವಾರ  ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳನ್ನು ನಿಷೇಧಿಸಿತ್ತು.

“ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಾದ್ಯಂತ ನಿರ್ಮಾಣ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದ ಈ ಅವಧಿಯಲ್ಲಿ ಪ್ರತಿಯೊಬ್ಬ ನಿರ್ಮಾಣ ಕಾರ್ಮಿಕರಿಗೆ 5000 ರೂ.ಗಳನ್ನು ಆರ್ಥಿಕ ಬೆಂಬಲವಾಗಿ ನೀಡುವಂತೆ ಕಾರ್ಮಿಕ ಸಚಿವ ಮನೀಶ್ ಸಿಸೋಡಿಯಾ ಅವರಿಗೆ ನಿರ್ದೇಶನ ನೀಡಿದ್ದೇನೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಎನ್.ಸಿ.ಆರ್. ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ವಾಯು ಗುಣಮಟ್ಟ ನಿರ್ವಹಣಾ ಆಯೋಗದ (ಸಿಎಕ್ಯೂಎಂ) ಗ್ರೇಡೆಡ್ ರೆಸ್ಪಾನ್ಸ್ ಆ್ಯಕ್ಷನ್ ಪ್ಲಾನ್ (ಜಿಆರ್ಎಪಿ) ಅಡಿಯಲ್ಲಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಉಪ ಸಮಿತಿಯು ಶನಿವಾರ ತುರ್ತು ಸಭೆ ನಡೆಸಿ, ಕುಸಿಯುತ್ತಿರುವ ಗಾಳಿಯ ಗುಣಮಟ್ಟವನ್ನು ಪರಿಹರಿಸಲು ತುರ್ತು ಸಭೆ ನಡೆಸಿತ್ತು ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ ‘ತೀವ್ರ’ ವಾಯು ಗುಣಮಟ್ಟ – ಗ್ರಾಫ್ ಮೂರನೇ ಹಂತದ ಅಡಿಯಲ್ಲಿ ಕಲ್ಪಿಸಲಾದ ಎಲ್ಲಾ ಕ್ರಮಗಳನ್ನು ಶಿಫಾರಸು ಮಾಡಿತ್ತು.

“ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ದೆಹಲಿಯಲ್ಲಿ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಯನ್ನು ನಿಷೇಧಿಸಲಾಗಿದೆ. ನಿರ್ಮಾಣ-ನೆಲಸಮ ನಿಷೇಧದ ಮೇಲ್ವಿಚಾರಣೆಗಾಗಿ 586 ತಂಡಗಳನ್ನು ರಚಿಸಲಾಗಿದೆ. ಮಾಲಿನ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೀರಿನ ಸಿಂಪಡಣೆಯನ್ನು ತೀವ್ರಗೊಳಿಸಲಾಗಿದೆ. ದೆಹಲಿಯಲ್ಲಿ ಮಾಲಿನ್ಯವನ್ನು ನಿಭಾಯಿಸಲು 521 ವಾಟರ್ ಸ್ಪ್ರಿಂಕ್ಲರ್ , 233 ಆಂಟಿ-ಸ್ಮಾಗ್ ಗನ್ ಮತ್ತು 150 ಸಂಚಾರಿ ಹೊಗೆ ವಿರೋಧಿ ಬಂದೂಕುಗಳನ್ನು ನಿಯೋಜಿಸಲಾಗಿದೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಭಾನುವಾರ ಕಟ್ಟಡ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಯ ಮೇಲೆ ನಿಷೇಧ ಹೇರುವಾಗ ಹೇಳಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

59 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago