ನವದೆಹಲಿ: ಕೇರಳದಲ್ಲಿ ಇಂದು ಒಂದೇ ದಿನ 115 ಕೋವಿಡ್ ಪ್ರಕರಣ ದಾಖಲಾಗಿದೆ. ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1749ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಇಂದು ಒಟ್ಟು 142 ಕೋವಿಡ್ ಪ್ರಕರಣ ಪತ್ತೆಯಾಗಿದೆ.
ಈ ಪೈಕಿ 115 ಕೇರಳದಲ್ಲೇ ಪತ್ತೆಯಾಗಿದೆ. ಇದು ಆತಂಕ ಹೆಚ್ಚಿಸಿದೆ. ಕೇರಳದಲ್ಲಿ ದಿಢೀರ್ ಕೋವಿಡ್ ಏರಿಕೆಯಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ.
ಭಾರತದಲ್ಲಿ ಕೋವಿಡ್ ಏರಿಕೆಯಾಗುತ್ತಿದ್ದರೆ, ಸಿಂಗಾಪುರದಲ್ಲಿ ಕೋವಿಡ್ ಗಣನೀಯವಾಗಿ ಏರಿಕೆಯಾಗಿದೆ. ಒಂದು ವಾರದಲ್ಲಿ 56,000 ಕೋವಿಡ್ ಪ್ರಕರಣ ಪತ್ತೆಯಾಗಿದೆ.