News Karnataka Kannada
Monday, April 29 2024
ದೆಹಲಿ

ಸರನ್ ಲೋಕಸಭಾ ಕ್ಷೇತ್ರದಿಂದ ಲಾಲೂ ಪ್ರಸಾದ್ ಪುತ್ರಿ ಸ್ಪರ್ಧೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಸ್ಪರ್ಧಿಸಲಿದ್ದಾರೆ.
Photo Credit : NewsKarnataka

ಬಿಹಾರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಸ್ಪರ್ಧಿಸಲಿದ್ದಾರೆ.

ಬಿಹಾರದ ಸರನ್ ಲೋಕಸಭಾ ಕ್ಷೇತ್ರದಿಂದ ಲಾಲೂ ಪ್ರಸಾದ್ ಯಾದವ್ ಪುತ್ರಿ ಆರ್​ಜೆಡಿ ಕಾರ್ಯಕರ್ತೆ ರೋಹಿಣಿ ಆಚಾರ್ಯ ಅವರನ್ನು ಕಣಕ್ಕಿಳಿಸಲು ಚರ್ಚೆ ನಡೆಯುತ್ತಿದೆ. ಇಲ್ಲಿಯವರೆಗೆ  ಆರ್​ಜೆಡಿ ತನ್ನ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ.

ಸಿಂಗಾಪುರದಲ್ಲಿ ನೆಲೆಸಿರುವ ರೋಹಿಣಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.

ಮ್ಮ ಮಗಳು ರೋಹಿಣಿ ತನ್ನ ಕಿಡ್ನಿಯನ್ನು ದಾನ ಮಾಡುವ ಮೂಲಕ ತನ್ನ ಜೀವವನ್ನು ಉಳಿಸಿದ್ದಾಳೆ ಎಂದು ಅವರು ಪ್ರತಿ ಬಾರಿಯೂ ಅನೇಕ ವೇದಿಕೆಗಳಲ್ಲಿ ಹೇಳುತ್ತಲೇ ಇರುತ್ತಾರೆ. ಇದೀಗ ಲಾಲು ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯ ಶೀಘ್ರದಲ್ಲೇ ಚುನಾವಣಾ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು