Categories: ದೆಹಲಿ

ಬಹುಮಹಡಿ ಕಟ್ಟಡದಿಂದ ಬಿದ್ದ ಲಿಫ್ಟ್- 9 ಮಂದಿ ಟೆಕ್ಕಿಗಳಿಗೆ ಗಾಯ

ನವದೆಹಲಿ: ಬಹುಮಹಡಿ ಕಟ್ಟಡದ ಲಿಫ್ಟ್ ನಿಂದ ಬಿದ್ದು 9 ಮಂದಿ ಐಟಿ ಉದ್ಯೋಗಿಗಳು ಗಾಯಗೊಂಡಿರುವ ಘಟನೆ ನೋಯ್ಡಾ ಸೆಕ್ಟರ್ 125 ರ ರಿವರ್ ಸೈಡ್ ಟವರ್ ನಲ್ಲಿರುವ ಲಿಫ್ಟ್ ನಲ್ಲಿ ನಡೆದಿದೆ.

ಗಾಯಗೊಂಡವರನ್ನು ಪಿಯೂಷ್ ಶರ್ಮಾ (22), ಅಭಿಷೇಕ್ ಪಂಡಿತ್ (23), ಅಭಿಷೇಕ್ ಗುಪ್ತಾ (24), ಸೌರಭ್ ಕಟಿಯಾ (28), ರಜತ್ ಶರ್ಮಾ (29), ಶುಭಂ ಭಾರದ್ವಾಜ್ (22), ಯಶು ಶರ್ಮಾ (23), ಸಾಗರ್ (23) ಮತ್ತು ಅಭಿಜೀತ್ ಸಿಂಗ್ (23) ಎಂದು ಗುರುತಿಸಲಾಗಿದೆ.

ಎರಾಸ್ಮಿತ್ ಟೆಕ್ನಾಲಜೀಸ್‍ನ ಉದ್ಯೋಗಿಗಳು 8 ನೇ ಮಹಡಿಯಲ್ಲಿರುವ ತಮ್ಮ ಕಚೇರಿಯಿಂದ ಕೆಲಸ ಮುಗಿಸಿ ತೆರಳಲು 5.45ರ ಸುಮಾರಿಗೆ ಲಿಫ್ಟ್ ನಲ್ಲಿ ಬರುತ್ತಿದ್ದಾಗ ಈ ದುರಂತ ನಡೆದಿದೆ.

ಘಟನೆಯಿಂದಾಗಿ 9 ಜನರಲ್ಲಿ ಐವರ ಕೈ ಮತ್ತು ಕಾಲುಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಉದ್ಯೋಗಿಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ramya Bolantoor

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago