News Karnataka Kannada
Sunday, May 12 2024
ದೆಹಲಿ

ಮದ್ಯನೀತಿ ಕೇಸ್‌: ಆಮ್ ಆದ್ಮಿಯ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ದಾಳಿ

Liquor case: ED raids Aam Aadmi Party's Sanjay Singh's residence
Photo Credit : News Kannada

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತಂಡವು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ಇಂದು(ಅ.04) ಶೋಧ ನಡೆಸಿದೆ.

ದೆಹಲಿಯ ಸಂಜಯ್ ಸಿಂಗ್ ಅವರ ನಿವಾಸದಲ್ಲಿ ತನಿಖಾ ಸಂಸ್ಥೆ ED ತಂಡ ಪರಿಶೀಲನೆ ನಡೆಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಸಂಜಯ್ ಸಿಂಗ್ ಹೆಸರನ್ನು ಉಲ್ಲೇಖಿಸಲಾಗಿತ್ತು.

ಇಡಿ ಚಾರ್ಜ್‌ಶೀಟ್ ಪ್ರಕಾರ, ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾದ ದೆಹಲಿ ಮೂಲದ ಉದ್ಯಮಿ ದಿನೇಶ್ ಅರೋರಾ ಅವರು ಈ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿ ಸಂಜಯ್ ಸಿಂಗ್ ಅವರ ಸಮ್ಮುಖದಲ್ಲಿ ಭೇಟಿಯಾಗಿದ್ದರು. ದೆಹಲಿ ಚುನಾವಣೆಗೂ ಮುನ್ನ ನಿಧಿ ಸಂಗ್ರಹಿಸಲು ಈ ಪ್ಲಾನ್ ಮಾಡಲಾಗಿತ್ತು ಎನ್ನಲಾಗಿದೆ.

ದಾಳಿ ಕುರಿತು ಸಂಜಯ್‌ ಸಿಂಗ್‌ ಅವರ ತಂದೆ ಪ್ರತಿಕ್ರಿಯಿಸಿದ್ದು, “ಅಧಿಕಾರಿಗಳು ಅವರ ಕೆಲಸ ಮಾಡುತ್ತಿದ್ದಾರೆ. ನಾವು ಅವರಿಗೆ ಸಹಕಾರ ನೀಡುತ್ತಿದ್ದೇವೆ. ನನ್ನ ಮಗ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರಬರಲಿದ್ದಾನೆ” ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು