ದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಎರಡನೇ ಸಮನ್ಸ್ ನೀಡಿದೆ. ಡಿ.21 ರಂದು ಏಜೆನ್ಸಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
ಇಡಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ಹಾಜರಾಗುವಂತೆ ಕೇಳಿತ್ತು. ಆದರೆ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು ಹಾಜರಾಗಿರಲಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷದ ಇಬ್ಬರು ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಗಳು ಬಂಧಿಸಿವೆ.