News Karnataka Kannada
Friday, May 03 2024
ದೆಹಲಿ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್.ಕೆ ಅಡ್ವಾಣಿ ಭಾಗಿ

ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಸ್ಪಷ್ಟಪಡಿಸಿದ್ದಾರೆ.
Photo Credit : News Kannada

ನವದೆಹಲಿ: ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಡಿಸೆಂಬರ್‌ನಲ್ಲಿ ಬಿಜೆಪಿ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ವಿಎಚ್‌ಪಿ ಆಹ್ವಾನಿಸಿತ್ತು. ಆದರೆ, ಎಲ್‌ಕೆ ಅಡ್ವಾಣಿ ಮತ್ತು 89ರ ಹರೆಯದ ಮುರಳಿ ಮನೋಹರ್ ಜೋಷಿ ಅವರ ಆರೋಗ್ಯದ ಕಾರಣದಿಂದ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ದೇವಸ್ಥಾನದ ಟ್ರಸ್ಟ್ ಹೇಳಿತ್ತು. ಆದರೆ ಈಗ ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಎಲ್‌ಕೆ ಅಡ್ವಾಣಿ ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ವಿಹೆಚ್ ಪಿಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು