News Karnataka Kannada
Thursday, May 02 2024
ದೆಹಲಿ

ಲೋಕಸಭಾ ಚುನಾವಣೆ: ಇಂದು 102 ಕ್ಷೇತ್ರಗಳ ಮೊದಲ ಹಂತದ ಮತದಾನ ಆರಂಭ

ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ  ಆರಂಭವಾಗಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ. ಮುಂಜಾನೆ 7 ಗಂಟೆಗೇ ವೋಟಿಂಗ್‌ ಆರಂಭವಾಗಿದೆ.
Photo Credit : NewsKarnataka

ಹೊಸದಿಲ್ಲಿ: ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ  ಆರಂಭವಾಗಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ. ಮುಂಜಾನೆ 7 ಗಂಟೆಗೇ ವೋಟಿಂಗ್‌ ಆರಂಭವಾಗಿದೆ.

ಇಂದು ಒಟ್ಟು 102 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಚುನಾವಣೆ ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿದ್ದು, ಜೂನ್ 1ರಂದು ಕೊನೆಗೊಳ್ಳಲಿದ್ದು, ಎಣಿಕೆ ಮತ್ತು ಫಲಿತಾಂಶ ಘೋಷಣೆ ಜೂನ್ 4ರಂದು ನಡೆಯಲಿದೆ.

21 ರಾಜ್ಯಗಳ 102 ಕ್ಷೇತ್ರಗಳಲ್ಲಿ 11 ಎಸ್ಟಿ, 18 ಎಸ್ಸಿ, 73 ಸಾಮಾನ್ಯ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ.

ಇಂದು ಮತದಾನ ಮಾಡಲಿರುವ ರಾಜ್ಯಗಳು
ತಮಿಳುನಾಡಿನ 39 ಕ್ಷೇತ್ರಗಳು
ರಾಜಸ್ಥಾನದ 12 ಕ್ಷೇತ್ರಗಳು
ಉತ್ತರ ಪ್ರದೇಶದ 8 ಕ್ಷೇತ್ರಗಳು
ಮಧ್ಯ ಪ್ರದೇಶದ 6 ಕ್ಷೇತ್ರಗಳು
ಉತ್ತರಾಖಂಡದ 5 ಕ್ಷೇತ್ರಗಳು
ಮಹಾರಾಷ್ಟ್ರದ 5 ಕ್ಷೇತ್ರಗಳು
ಅಸ್ಸಾಂನ 5 ಕ್ಷೇತ್ರಗಳು
ಬಿಹಾರದ 4 ಕ್ಷೇತ್ರಗಳು
ಪಶ್ಚಿಮ ಬಂಗಾಳದ 3 ಕ್ಷೇತ್ರಗಳು
ಮಣಿಪುರದ 2 ಕ್ಷೇತ್ರಗಳು
ಅರುಣಾಚಲ ಪ್ರದೇಶದ 2 ಕ್ಷೇತ್ರಗಳು
ಮೇಘಾಲಯ 2 ಕ್ಷೇತ್ರಗಳು
ಪುದುಚೆರಿ, ಅರುಣಾಚಲ ಪ್ರದೇಶ, ಛತ್ತೀಸ್‌ಘಡ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

18 ಲಕ್ಷ ಮತಗಟ್ಟೆ ಸಿಬ್ಬಂದಿ ನಿಯೋಜಿಸಲಾಗಿದೆ. 1.87 ಲಕ್ಷ ಮತಗಟ್ಟೆಗಳ ನಿರ್ಮಾಣವಾಗಿದ್ದು, 16.63 ಕೋಟಿ ಮತದಾರರಿಂದ ಮತದಾನ ನಡೆಯಲಿದೆ. ಇವರಲ್ಲಿ 8.4 ಕೋಟಿ ಪುರುಷ, 8.23 ಕೋಟಿ ಮಹಿಳಾ ಮತ್ತು 11,371 ತೃತೀಯ ಲಿಂಗಿ ಮತದಾರರು ಇದ್ದಾರೆ. 35.67 ಲಕ್ಷ ಯುವ ಸಮೂಹದಿಂದ ಮೊದಲ ಸಲ ಓಟಿಂಗ್ ನಡೆಯುತ್ತಿದೆ. 3.51 ಕೋಟಿ ಯುವ ಮತದಾರರು ಹಾಗೂ 14.14 ಲಕ್ಷ 85+ ವಯಸ್ಸಿನ ಮತದಾರರು ಇದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು