Categories: ದೆಹಲಿ

ಮೋದಿಗೆ ಆತಿಥ್ಯ ನೀಡಲು ಎದುರು ನೋಡುತ್ತಿದ್ದೇವೆ: ಅಮೆರಿಕ ಆಡಳಿತ

ನವದೆಹಲಿ: ಜೂನ್ 22 ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಆತಿಥ್ಯ ನೀಡಲು ಎದುರು ನೋಡುತ್ತಿರುವುದಾಗಿ ಅಮೆರಿಕದ ಆಡಳಿತ ಹೇಳಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮೋದಿಯವರ ಮುಂಬರುವ ಅಧಿಕೃತ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗೆ, ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಹೀಗೆ ಹೇಳಿದ್ದಾರೆ.

“ಈ ತಿಂಗಳ ಅಂತ್ಯದಲ್ಲಿ ಮೋದಿ ಅಮೆರಿಕಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ಮೋದಿ ಅವರ ಆತಿಥ್ಯ ನೀಡಲು ಎದುರು ನೋಡುತ್ತಿದ್ದೇವೆ. ಭಾರತದೊಂದಿಗೆ ನಮ್ಮ ಪಾಲುದಾರಿಕೆ ಅತ್ಯಂತ ಪರಿಣಾಮಕಾರಿ ಸಂಬಂಧಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ನಾವು ನಮ್ಮ ಆರ್ಥಿಕ ಸಂಬಂಧಗಳು ಮತ್ತು ವ್ಯಾಪಾರ ಸಮಸ್ಯೆಗಳನ್ನು ಗಾಢವಾಗಿಸಲು ಎದುರು ನೋಡುತ್ತಿದ್ದೇವೆ. ಅಮೆರಿಕ ಅಧ್ಯಕ್ಷ ಜೋ ಬಿಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬಿಡೆನ್ ಅವರ ಆಹ್ವಾನದ ಮೇರೆಗೆ ಮೋದಿ ಭೇಟಿ ನೀಡಲಿದ್ದಾರೆ.

ಮೋದಿ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ, ಭಾರತೀಯ ನಾಯಕನಿಗೆ ನೀಡಲಾಗುತ್ತಿರುವ ಶ್ವೇತಭವನ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2009 ರಲ್ಲಿ ಆಗಿನ ಯುಎಸ್ ಅಧ್ಯಕ್ಷ ಬರಾಕ್ ಒಬಾಮಾ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ್ತು ಸೆನೆಟ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಯುಎಸ್ ಕಾಂಗ್ರೆಸ್ ಮೋದಿಯನ್ನು ಆಹ್ವಾನಿಸಿದೆ.

Sneha Gowda

Recent Posts

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

15 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

26 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

9 hours ago