ನವದೆಹಲಿ: ಕೇಂದ್ರ ಸರ್ಕಾರದಿಂದ ಉಜ್ವಲ್ ಯೋಜನೆಯ ಎಲ್ಪಿಜಿ ಸಿಲಿಂಡರ್ ಸಬ್ಸಿಡಿ ರೂ.200 ರಿಂದ 300ಕ್ಕೆ ಹೆಚ್ಚಳ ಮಾಡಲಾಗಿದೆ. ಕೆಲ ತಿಂಗಳ ಹಿಂದಷ್ಟೇ ಉಜ್ವಲ್ ಯೋಜನೆಯ ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ದರವನ್ನು 200ರೂ.ಗೆ ಕೇಂದ್ರ ಸರ್ಕಾರ ಹೆಚ್ಚಳ ಮಾಡಿ ಸಿಹಿಸುದ್ದಿ ನೀಡಿತ್ತು.
ಇಂದು ಮತ್ತೆ 200 ರೂಗಳಿಂದ 300 ರೂ.ಗಳಿಗೆ ಹೆಚ್ಚಳ ಮಾಡಿ ಭರ್ಜರಿ ಗುಡ್ ನ್ಯೂಸ್ ಅನ್ನು ಉಜ್ವಲ್ ಯೋಜನೆ ಫಲಾನುಭವಿಗಳಿಗೆ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ಮೊತ್ತವನ್ನು ಪ್ರತಿ ಎಲ್ಪಿಜಿ ಸಿಲಿಂಡರ್ಗೆ 200 ರೂ.ಗಳಿಂದ 300 ರೂ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.