Categories: ದೆಹಲಿ

‘ಇಂಡಿಯಾ’ ಒಕ್ಕೂಟದಿಂದ ರಾಷ್ಟ್ರಪತಿ ಭೇಟಿ: ಮಣಿಪುರ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ದ ಸಂಸದರು ಮತ್ತು ಹಲವು ನಾಯಕರು ಇಂದು (ಆ.02) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.

ರಾಷ್ಟ್ರಪತಿಗಳ ಭೇಟಿ ಮಾಡಿದ ವಿಪಕ್ಷಗಳ ಸಂಸದರು, ಮಣಿಪುರ ಹಿಂಸಾಚಾರ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ, ಶಾಂತಿ ಮರುಸ್ಥಾಪಿಸುವಂತೆ ಮನವಿ ಮಾಡಿಕೊಂಡರು. ಬಿಜೆಪಿ ಆಡಳಿತವಿರುವ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ, ಈ ವಿಚಾರದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ, ಶಾಂತಿ ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು ಪ್ರತಿಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಗೆ ಒತ್ತಾಯಿಸುತ್ತಿವೆ. ಆದರೆ, ಸಂಸತ್ತಿನಲ್ಲಿ ಮೋದಿಯವರು ಉತ್ತರ ನೀಡುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರಿಸುತ್ತಿದ್ದಾರೆ.

ಪ್ರಧಾನಮಂತ್ರಿ ಕಚೇರಿಯಿಂದ ಕೇವಲ 100 ಕಿಮೀ ದೂರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆಯೂ ಕೇಂದ್ರ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಮಹಿಳೆಯರಿಗೆ ನೆರವು ನೀಡಲು ವಿವಿಧ ಸಮುದಾಯಗಳ ಇಬ್ಬರು ಮಣಿಪುರ ಮಹಿಳೆಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವಂತೆ ದ್ರೌಪದಿ ಮುರ್ಮು ಅವರಿಗೆ ಸಲಹೆ ನೀಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಜೆಡಿಯು ನಾಯಕ ರಾಜೀವ್ ರಂಜನ್. ಶಿವಸೇನಾ (ಯುಬಿಟಿ) ಮುಖಂಡರಾದ ಅರವಿಂದ್ ಸಾವಂತ್ ಮತ್ತು ಸಂಜಯ್ ರಾವುತ್, ತೃಣಮೂಲ ನಾಯಕರಾದ ಸುದೀಪ್ ಬಂಡೋಪಾಧ್ಯಾಯ ಮತ್ತು ಡೆರೆಕ್ ಒ’ಬ್ರಿಯಾನ್ ಸೇರಿದಂತೆ ಇತರೆ ವಿಪಕ್ಷಗಳ ಸದಸ್ಯರು ಉಪಸ್ಥಿತರಿದ್ದರು. ಜುಲೈ 29-30 ರಂದು ಮಣಿಪುರಕ್ಕೆ ಭೇಟಿ ನೀಡಿದ್ದ ವಿರೋಧ ಪಕ್ಷದ ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್ (INDIA) ನ ಸಂಸದರು ರಾಷ್ಟ್ರಪತಿಯನ್ನು ಭೇಟಿಯಾದ ವಿರೋಧ ಪಕ್ಷದ ನಿಯೋಗದ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ashitha S

Recent Posts

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

11 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

23 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

25 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

32 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

38 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

51 mins ago