Categories: ದೆಹಲಿ

‘ಬೇಟಿ ಬಚಾವೋ’ ಘೋಷಣೆ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಇಂಫಾಲ್: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಬಿಲ್ಕಿಸ್ ಬಾನೋ ಪ್ರಕರಣ ಮತ್ತು ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣಗಳ ಬಗ್ಗೆ ಶುಕ್ರವಾರ ಬಿಜೆಪಿಯನ್ನು ಟೀಕಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ಹೇಳಿದ್ದಾರೆ.

ನೀವು (ಬಿಜೆಪಿ) ‘ಬೇಟಿ ಬಚಾವೋ’ ಘೋಷಣೆಯನ್ನು ನೀಡಿದ್ದೀರಿ, ಈಗ ನಿಮ್ಮ ಘೋಷಣೆ ಎಲ್ಲಿದೆ? ಮಣಿಪುರದ ಜನರೊಂದಿಗೆ ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಇಂದು ಮಣಿಪುರ ಹೊತ್ತಿ ಉರಿಯುತ್ತಿದೆ, ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ (ಬ್ರಿಜ್ ಭೂಷಣ್ ಸಿಂಗ್)ಗೂ ಜಾಮೀನು ಮಂಜೂರಾಗಿದೆ. ಮುಂಬರುವ ಚುನಾವಣೆಯಲ್ಲಿ ದೇಶದ ಮಹಿಳೆಯರು ನಿಮ್ಮನ್ನು ದೇಶದ ರಾಜಕೀಯದಿಂದ ಹೊರಹಾಕಲಿದ್ದಾರೆ.

ಬಿಜೆಪಿಯ ‘ಬೇಟಿ ಬಚಾವೋ’ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ. ತೃಣಮೂಲ ಕಾಂಗ್ರೆಸ್‌ಗೆ ಯಾವುದೇ ಕುರ್ಚಿ ಬೇಕಾಗಿಲ್ಲ, ಆದರೆ ಈ ಬಿಜೆಪಿ ಆಡಳಿತ ಹೋಗಬೇಕೆಂದು ನಾವು ಬಯಸುತ್ತೇವೆ ಎಂದಿದ್ದಾರೆ ಮಮತಾ. ನಾವು ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ಮೈತ್ರಿ I.N.D.I.A. ಬ್ಯಾನರ್ ಅಡಿಯಲ್ಲಿ ಎಲ್ಲಾ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ ಎಂದು ಬಂಗಾಳ ಮುಖ್ಯಮಂತ್ರಿ ಸಭೆಗೆ ತಿಳಿಸಿದರು.

 

Ashitha S

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

4 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

14 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

46 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

54 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

56 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago