ನವದೆಹಲಿ: ಭಾರತವು ತನ್ನ ಸಾರ್ವಭೌಮ ಮತ್ತು ಆರ್ಥಿಕ ಹಿತಾಸಕ್ತಿಗಳಿಗೆ ಆದ್ಯತೆ ನೀಡುವಲ್ಲಿ ಸರಿಯಾದ ಕೆಲಸವನ್ನು ಮಾಡಿದೆ ಮತ್ತು ಶಾಂತಿಗಾಗಿ ಮನವಿ ಮಾಡಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿ ಮೋದಿ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.
ವಿಶ್ವ ನಾಯಕರ ಮೆಗಾ ಜಿ 20 ಸಭೆಯ ಮೊದಲು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಭಾರತದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.
ಭಾರತದ ಜಿ20 ಅಧ್ಯಕ್ಷ ಸ್ಥಾನದ ಕುರಿತು ಮಾತನಾಡುತ್ತಾ, ಡಾ. ಸಿಂಗ್ ಅವರ ಸಮಯಕ್ಕಿಂತ ದೇಶೀಯ ರಾಜಕೀಯಕ್ಕೆ ವಿದೇಶಾಂಗ ನೀತಿಯು ಹೆಚ್ಚು ಮಹತ್ವದ್ದಾಗಿದೆ ಎಂದು ಹೇಳಿದರು. ರಾಜತಾಂತ್ರಿಕತೆಯನ್ನು ಪಕ್ಷ ರಾಜಕಾರಣಕ್ಕೆ ಬಳಸಿಕೊಳ್ಳುವಲ್ಲಿ ಸಂಯಮ ಕಾಯ್ದುಕೊಳ್ಳುವುದು ಮುಖ್ಯ ಎಂದರು.
ರಷ್ಯಾ- ಉಕ್ರೇನ್ ಯುದ್ದದ ವಿಚಾರದಲ್ಲಿ ಕಠಿಣ ರಾಜತಾಂತ್ರಿಕ ಸ್ಥಾನವನ್ನು ಭಾರತ ಸರ್ಕಾರ ನಿಭಾಯಿಸಿದ ರೀತಿಗೆ ಮನಮೋಹನ್ ಸಿಂಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.