ಹೊಸದಿಲ್ಲಿ: ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಬೀಡ್ ಜಿಲ್ಲೆಯ ಮಹಾರಾಷ್ಟ್ರ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಗೆ ಸೋಮವಾರ ಬೆಂಕಿ ಹಚ್ಚಲಾಗಿದೆ.
ಕೋಟಾ ಪರ ಹೋರಾಟಗಾರ ಮನೋಜ್ ಪಾಟೀಲ್ ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಯಿಂದ ಪ್ರತಿಭಟನಾಕಾರರು ಆಕ್ರೋಶಗೊಂಡು ಮನೆಗೆ ಕಿಚ್ಚು ಹಚ್ಚಿದ್ದಾರೆ. ಅಲ್ಲದೆ ಮನೆಯ ಮುಂದೆ ನಿಲ್ಲಿಸಲಾಗಿದ್ದ ವಾಹನಗಳಿಗೂ ಪ್ರತಿಭಟನಾಕಾರರು ಬೆಂಕಿ ಇಟ್ಟಿದ್ದಾರೆ.
ಪ್ರತಿಭಟನಾಕಾರರ ಮನೆಗೆ ಮೊದಲು ಕಲ್ಲು ಎಸೆಯುವುದು ವಿಡಿಯೋದಲ್ಲಿ ದಾಖಲಾಗಿದೆ. ಬಳಿಕ ದೊಡ್ಡ ಬಂಗಲೆ ಸಂಪೂರ್ಣವಾಗಿ ಬೆಂಕಿ ಜ್ವಾಲೆಯಿಂದ ತುಂಬಿಹೋಗಿದೆ. ಎನ್ಸಿಪಿ ಈ ಕೃತ್ಯವನ್ನು ಖಂಡಿಸಿದ್ದು, ಇದು ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿದೆ.