ನವದೆಹಲಿ, ಆ.11: ದೆಹಲಿಯಲ್ಲಿ ಕೊರೊನ ವೈರಸ್ ಪ್ರಕರಣಗಳಲ್ಲಿ ಮತ್ತೊಮ್ಮೆ ಹೆಚ್ಚಳ ಕಂಡಿದ್ದು, ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಿಯಮ ಮೀರಿದರೆ 500 ರೂ. ದಂಡ ವಿಧಿಸಲಾಗುವುದು ಎಂದು ದಕ್ಷಿಣ ದೆಹಲಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಹೇಳಿದೆ.
ದಕ್ಷಿಣ ದೆಹಲಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಹೊರಡಿಸಿದ ಸೂಚನೆಯ ಪ್ರಕಾರ, ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಮತ್ತು ಅಂತಹ ಪ್ರದೇಶಗಳಲ್ಲಿ ಮಾಸ್ಕ್ ಗಳಿಲ್ಲದೆ ಕಾಣಿಸಿಕೊಂಡವರಿಗೆ 500 ರೂ ದಂಡ ವಿಧಿಸಲಾಗುತ್ತದೆ ಎಂದು ಸೂಚಿಸಿದೆ.
ಕಳೆದ ಹದಿನೈದು ದಿನಗಳಲ್ಲಿ, ದೆಹಲಿಯಲ್ಲಿ ಕೊರೊನ ಪಾಸಿಟಿವಿಟಿ ದರವು ಏರಿಕೆಯಾಗಿದೆ. ಆದ್ದರಿಂದ ದೆಹಲಿಯ ಅಧಿಕಾರಿಗಳು ಹೊಸ ನಿರ್ಬಂಧಗಳನ್ನು ವಿಧಿಸಲು ನಿರ್ಧರಿಸಿದ್ದಾರೆ. ದೆಹಲಿ ಎಡಿಎಂ ಹೊರಡಿಸಿದ ನೋಟೀಸ್ ಪ್ರಕಾರ, “ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸದಿರುವುದನ್ನು ಕಡ್ಡಾಯ ಮಾಡಲಾಗಿದೆ. ಹಾಗೊಂದು ವೇಳೆ ಮಾಸ್ಕ್ ಗಳನ್ನು ಧರಿಸದಿದ್ದರೆ 500 ರೂ ದಂಡ ವಿಧಿಸಲಾಗುತ್ತದೆ ” ಎಂದು ತಿಳಿಸಲಾಗಿದೆ.
ಖಾಸಗಿ ನಾಲ್ಕು ಚಕ್ರ ವಾಹನಗಳಲ್ಲಿ ಪ್ರಯಾಣಿಸುವ ವ್ಯಕ್ತಿಗಳಿಗೆ ಈ ನಿಯಮವು ಅನ್ವಯಿಸುವುದಿಲ್ಲ.