News Karnataka Kannada
Wednesday, May 01 2024
ದೆಹಲಿ

ಅಣಕು ಮತದಾನದಲ್ಲಿ ಬಿಜೆಪಿಗೆ ಹೆಚ್ಚುವರಿ ಮತ: ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಆದೇಶ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ  ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್  ಭಾರತೀಯ ಚುನಾವಣಾ ಆಯೋಗಕ್ಕೆ  ಆದೇಶಿಸಿದೆ.
Photo Credit : NewsKarnataka

ನವದೆಹಲಿ: ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ  ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್  ಭಾರತೀಯ ಚುನಾವಣಾ ಆಯೋಗಕ್ಕೆ  ಆದೇಶಿಸಿದೆ.

ಕೇರಳದ ಕಾಸರಗೋಡಿನಲ್ಲಿ  ಅಣಕು ಮತದಾನ ನಡೆದ ವೇಳೆ 4 ಇವಿಎಂಗಳು ಮತ್ತು ವಿವಿಪ್ಯಾಟ್‍ಗಳ  ಹೋಲಿಕೆಯಲ್ಲಿ ಬಿಜೆಪಿಗೆ ಒಂದು ಹೆಚ್ಚುವರಿ ಮತ ಬಂದಿದೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ ನಂತರ ನ್ಯಾ.ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ದ್ವಿಸದಸ್ಯ ಪೀಠವು ಇವಿಎಂ ಸಮಸ್ಯೆಯನ್ನು ಪರಿಶೀಲಿಸುವಂತೆ ಇಸಿಐಗೆ ಸೂಚಿಸಿತು.

ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವಿವಿಪ್ಯಾಟ್ ಸ್ಲಿಪ್‍ಗಳೊಂದಿಗೆ ತಾಳೆ ಮಾಡಲು ಕೋರಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಅರುಣ್ ಕುಮಾರ್ ಅಗರ್ವಾಲ್ ಪ್ರತಿಯೊಂದು ಇವಿಎಂ ಮತವನ್ನು ವಿವಿಪ್ಯಾಟ್ ಸ್ಲಿಪ್‍ಗಳಿಗೆ ಹೋಲಿಸಿ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು