ನವದೆಹಲಿ: ನವದೆಹಲಿಯಲ್ಲಿ ನಡೆಯಲಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಲ್ಗೊಳ್ಳಲಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.
ಸೆ. 7ರಂದು ಬೈಡನ್ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ. 8ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜಿ 20 ಶೃಂಗ ಸಭೆ ಸೆ.9, 10ರಂದು ನವದೆಹಲಿಯಲ್ಲಿ ನಡೆಯಲಿದ್ದು, ಭಾರತ ಅಮೆರಿಕ ಮಾತುಕತೆಯ ಮೂಲಕ ಬಾಂಧವ್ಯ ವೃದ್ಧಿಗೆ ಮುಂದಾಗಿದೆ.