News Karnataka Kannada
Sunday, May 12 2024
ದೆಹಲಿ

ಮೋದಿ ಮುಂದುವರೆಯುವಿಕೆಯ ಬಗ್ಗೆ ಅಮಿತ್‌ ಶಾ ಹೇಳಿಕೆ; ಹತ್ತು ವರ್ಷ ಅವರೇ ಪ್ರಧಾನಿ ಎಂದ ಗೃಹಮಂತ್ರಿ

ಮುಂದಿನ 10 ವರ್ಷಗಳ ಕಾಲ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Photo Credit : News Kannada

ನವದೆಹಲಿ: ಮುಂದಿನ 10 ವರ್ಷಗಳ ಕಾಲ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಜನರ ಮನಸ್ಥಿತಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅವಲಂಬಿತವಾಗಿರುತ್ತಿತ್ತು ಎಂದು ಆರೋಪಿಸಿದ ಅವರು,ನಮ್ಮ ದೇಶದಲ್ಲಿರುವ ಪ್ರಜಾಪ್ರಭುತ್ವ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತದೆ. ಯಾರು ಅಧಿಕಾರದಲ್ಲಿ ಉಳಿಯುತ್ತಾರೆ ಎಂಬುದನ್ನು ಕಾರ್ಯಕ್ಷಮತೆ ನಿರ್ಧರಿಸುತ್ತದೆ ಹಾಗು ಮೋದಿ ಕಾರ್ಯಕ್ಷಮತೆಯ ರಾಜಕೀಯವನ್ನು ಸ್ಥಾಪಿಸಿದ್ದಾರೆ ಎಂದರು.

ʼಮೋದಿಗೆ ಕುಟುಂಬವಿಲ್ಲʼ ಎಂದ ಲಾಲು ಪ್ರಸಾದ್‌ ಯಾದವ್‌ ಅವರ ಮಾತನ್ನು ಉಲ್ಲೇಖಿಸಿದ ಅಮಿತ್‌ ಶಾ, ಒಂದು ರೀತಿಯಲ್ಲಿ ಅವರು ಸರಿಯಾಗಿಯೇ ಹೇಳಿದ್ದಾರೆ. ಕಾರಣ, ಕುಟುಂಬಸ್ಥರು ತಮ್ಮ ಮಕ್ಕಳನ್ನು ಅಧಿಕಾರಕ್ಕೇರಿಸಲು ಪ್ರಯತ್ನಿಸುತ್ತಾರೆ ಎಂದು ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶಕ್ಕಾಗಿ ಮೋದಿ ಮಾಡಿದ ಕೆಲಸಗಳ ಬಗ್ಗೆ ಮಾತನಾಡುತ್ತ, 23 ವರ್ಷಗಳ ಕಾಲ ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದರೂ ಮೋದಿ ರಜೆ ತೆಗೆದುಕೊಂಡಿರುವುದನ್ನು ನಾನು ನೋಡಿಲ್ಲ. ಅವರನ್ನು ಹತ್ತಿರದಿಂದ ನೋಡಿದ್ದೇನೆ ಎಂದು ಅಮಿತ್‌ ಶಾ ಪ್ರಧಾನಿಗಳ ಕಾರ್ಯಕ್ಷಮತೆಯನ್ನು ಬಣ್ಣಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು