ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ ಇದ್ದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೋದಿಯವರಿಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್-ಹಮಾಸ್ ಯುದ್ಧದ ಬಗೆಗಿನ ಆಸಕ್ತಿಯೇ ಹೆಚ್ಚಿದ್ದಂತೆ ಕಾಣುತ್ತಿದೆ ಎಂದರು. ಇನ್ನು ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದೆ, ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.