ನವದೆಹಲಿ: ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದ ದೇಶದಲ್ಲಿ JN.1 ಉಪತಳಿ ಆತಂಕಹೆಚ್ಚಾಗಿದೆ.
ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,742ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣ 4054ಕ್ಕೆ ಏರಿಕೆಯಾಗಿದೆ.
ಈವರೆಗೆ 44471860 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 220,67,79,081 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.