News Karnataka Kannada
Monday, April 29 2024
ದೆಹಲಿ

ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಡೆರೆಕ್ ಒಬ್ರಿಯಾನ್ ಅಮಾನತು

Mp Derek O'Brien suspended for protesting in well of House
Photo Credit : News Kannada

ದೆಹಲಿ: ಸಂಸತ್​ನಲ್ಲಿನ ಭದ್ರತಾ ಲೋಪದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್​ರನ್ನು ಚಳಿಗಾಲದ ಅಧಿವೇಶನ ಮುಗಿಯುವವರೆಗೂ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಸಂಸದರ ಅಶಿಸ್ತಿನ ವರ್ತನೆಯನ್ನು ಖಂಡಿಸಿದ ಧಂಖರ್, ಇದು ನಿಯಮಗಳನ್ನು ಉಲ್ಲಂಘಿಸಿದಂತಾಗಿದೆ ಎಂದು ಹೇಳಿದರು. ಮೇಲ್ಮನೆಯು ಒಬ್ರಿಯಾನ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ಪ್ರಸ್ತಾಪವನ್ನು ಅಂಗೀಕರಿಸಿತು.

ಭದ್ರತಾ ಲೋಪದ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ.

ಇದೇ ವೇಳೆ ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯಾನ್​​ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.

ಪ್ರೇಕ್ಷಕರ ಗ್ಯಾಲರಿಯಿಂದ ಸಂಸದರಲ್ಲಿದ್ದಲ್ಲಿಗೆ ಇಬ್ಬರು ನುಗ್ಗಿದ್ದರು, ಬಳಿಕ ಅಶ್ರುವಾಯು ಸಿಡಿಸಿದ್ದರು. ಇದು ಸಂಸತ್ತಿನ ದೊಡ್ಡ ಮಟ್ಟದ ಭದ್ರತಾ ಲೋಪ ಎಂದೇ ಹೇಳಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು