Categories: ದೆಹಲಿ

ಸಿಖ್ಖರ ನರಮೇಧ ಮಾಡಿದ ನರೇಂದ್ರ ಮೋದಿ- ನವದೆಹಲಿಯಲ್ಲಿ ಖಲಿಸ್ತಾನಿ ಬರಹ

ನವದೆಹಲಿ: ನವದೆಹಲಿಯ ಕಾಶ್ಮೀರಿ ಗೇಟ್ ಮೇಲ್ಸೇತುವೆಯ ಕೆಳಗಿರುವ ಗೋಡೆಗಳ ಮೇಲೆ ಖಲಿಸ್ತಾನಿ ಪರ ಬರಹ ಕಂಡುಬಂದಿವೆ. ಈ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಖಲಿಸ್ತಾನಿ ಪರ ಬರಹವೊಂದನ್ನು ಗೋಡೆಗಳಲ್ಲಿ ಬರೆದಿರುವ ಬಗ್ಗೆ ವಿಡಿಯೋವೊಂದು ಜಾಲತಾಣಗಳಲ್ಲಿ ಹರಿದಾಡಿದ್ದು, ಅದರಂತೆ ಶೋಧ ಆರಂಭಿಸಿದಾಗ ಸೀಲಂಪುರದಿಂದ ಕಾಶ್ಮೀರ್ ಗೇಟ್ ಕಡೆಗೆ ಬರುತ್ತಿರುವಾಗ ಯುಧಿಸ್ಟರ್ ಮೇಲ್ಸೇತುವೆಯಲ್ಲಿ ಬರಹ ಕಂಡುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಖ್ಖರ ನರಮೇಧ ಮಾಡಿದ ನರೇಂದ್ರ ಮೋದಿ, ಅಲ್ಲದೆ ಡೆಲ್ಲಿ ಬನ್‌ಗಯಾ ಖಲಿಸ್ತಾನ್‌ ಎಂಬ ಬರಹವಿದೆ.
ಭಾರತ ದಂಡ ಸಂಹಿತೆ ಮತ್ತು ದೆಹಲಿ ಸಾರ್ವಜನಿಕ ಆಸ್ತಿ ವಿರೂಪಗೊಳಿಸುವಿಕೆ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ವಿಷಯದಲ್ಲಿ ತನಿಖೆ ಪ್ರಾರಂಭಿಸಲಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ. ಆಗಸ್ಟ್‌ನಲ್ಲಿ ದೆಹಲಿ ಪೊಲೀಸ್ ಅಪರಾಧ ವಿಭಾಗವು ದೆಹಲಿ ಮೆಟ್ರೋ ನಿಲ್ದಾಣಗಳಲ್ಲಿ ಗೋಡೆಗಳಲ್ಲಿ ಖಲಿಸ್ತಾನಿ ಪರ ಬರಹ ಬರೆದ ಪಂಜಾಬ್‌ನ ಇಬ್ಬರನ್ನು ಬಂಧಿಸಿತ್ತು.

ಇಬ್ಬರು ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಎಸ್‌ಎಫ್‌ಜೆಯೊಂದಿಗೆ ಸಂಬಂಧ ಹೊಂದಿದ್ದು, ಪ್ರಿತ್ಪಾಲ್ ಸಿಂಗ್ ಎ.ಕೆ ಕಾಕಾ (30) ಮತ್ತು ಆತನ ಸಹಚರ ರಾಜ್ವಿಂದರ್ ಅಲಿಯಾಸ್ ಕಾಳೆ ಎಂದು ಗುರುತಿಸಲಾಗಿತ್ತು. ಬರಹ ಬರೆಯಲು ಎಸ್‌ಎಫ್‌ಜೆ ಹ್ಯಾಂಡ್ಲರ್ ಗುರ್ಪತ್‌ವಂತ್ ಸಿಂಗ್ ಪನ್ನುನ್ 7,000 ಅಮೆರಿಕನ್‌ ಡಾಲರ್‌ ನೀಡುವುದಾಗಿ ಭರವಸೆ ನೀಡಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago