News Karnataka Kannada
Wednesday, April 17 2024
Cricket
ದೆಹಲಿ

2024ರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಚುನಾವಣೆ: ಎನ್‌ಡಿಎ ನಿರ್ಣಯ

NDA resolves to hold 2024 elections under PM Modi's leadership
Photo Credit : News Kannada

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2024 ರ ಲೋಕಸಭೆ ಚುನಾವಣೆ ಎದುರಿಸಲು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪಾಲುದಾರರು ನಿರ್ಣಯ ಅಂಗೀಕರಿಸಿದ್ದಾರೆ.

ಮಂಗಳವಾರ ನವದೆಹಲಿಯ ಅಶೋಕ್ ಹೋಟೆಲ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಶಿವಸೇನಾ ಅಧ್ಯಕ್ಷ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ನಿರ್ಣಯವನ್ನು ಮಂಡಿಸಿದರು.

ಎಐಎಡಿಎಂಕೆಯ ಕೆ.ಪಳನಿಸ್ವಾಮಿ ಮತ್ತು ಅಸೋಮ್ ಗಣ ಪರಿಷತ್‌ನ ಅತುಲ್ ಬೋರಾ ಕೂಡ ನಿರ್ಣಯವನ್ನು ಬೆಂಬಲಿಸಿದರು.

ಎನ್‌ಡಿಎ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸುಮಾರು 39 ಪಕ್ಷಗಳು ಭಾಗವಹಿಸಿದ್ದವು. ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸಿದ್ದರು.

ಕಳೆದ ಒಂಬತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರದ ಸಾಧನೆಗಳನ್ನು ಎನ್‌ಡಿಎ ಮಿತ್ರಪಕ್ಷಗಳು ಶ್ಲಾಘಿಸಿವೆ. ಹಲವು ಸಂದರ್ಭಗಳಲ್ಲಿ ದೇಶವಾಸಿಗಳು ಹೆಮ್ಮೆಪಡುವಂತೆ ಮಾಡಿದ್ದಕ್ಕಾಗಿ, ಎನ್‌ಡಿಎ ಯ ಎಲ್ಲಾ ಸಹ ಪಕ್ಷಗಳು ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತವೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶದ ಅಭಿವೃದ್ಧಿ ಪಯಣದಲ್ಲಿ ಪಾಲುದಾರರಾಗಿ ನಾವು ಒಂದಾಗಿದ್ದೇವೆ ಮತ್ತು ಒಗ್ಗಟ್ಟಾಗಿದ್ದೇವೆ ಎಂದು ಎನ್‌ಡಿಎ ಘಟಕಗಳು ಸರ್ವಾನುಮತದಿಂದ ನಿರ್ಣಯವನ್ನು ತೆಗೆದುಕೊಳ್ಳುತ್ತವೆ ಎಂದು ಪಕ್ಷಗಳ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಷ್ಟ್ರದ ಏಕತೆಗಾಗಿ ಶ್ರಮಿಸಿದೆ. ಅಲ್ಲದೆ ಸಾರ್ವಜನಿಕ ಕಲ್ಯಾಣ ಕಾರ್ಯಗಳನ್ನು ಆದ್ಯತೆಯಾಗಿ ಪರಿಗಣಿಸಿದೆ. 1998 ರಿಂದ 2004 ರವರೆಗಿನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವಾಗಲಿ ಅಥವಾ 2014 ರಿಂದ ಇಲ್ಲಿಯವರೆಗೆ ನರೇಂದ್ರ ಮೋದಿ ಸರ್ಕಾರವಾಗಲಿ, ಎನ್‌ಡಿಎ ಸರ್ಕಾರವು ಯಾವಾಗಲೂ ದೇಶದ ಪ್ರಾದೇಶಿಕ ಆಶಯಗಳನ್ನು ಬೆಂಬಲಿಸುವ ಮೂಲಕ ರಾಷ್ಟ್ರ ನಿರ್ಮಾಣದ ಕೆಲಸಗಳನ್ನು ಉತ್ಸಾಹದಿಂದ ಮಾಡಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು