Categories: ದೆಹಲಿ

ನವದೆಹಲಿ: ದೇಶದಲ್ಲಿ 1,334 ಹೊಸ ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು ಭಾನುವಾರ 1,334 ಹೊಸ ಕೋವಿಡ್ -19 ಸೋಂಕುಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದೇ ಅವಧಿಯಲ್ಲಿ, ದೇಶದಲ್ಲಿ ಇನ್ನೂ 16 ಕೋವಿಡ್ ಸಂಬಂಧಿತ ಸಾವುಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 5,28,977 ಕ್ಕೆ ಏರಿದೆ ಎಂದು ವರದಿ ತಿಳಿಸಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,193 ಆಗಿದ್ದು, ಇದು ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಶೇಕಡಾ 0.05 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 1,557 ರೋಗಿಗಳು ಚೇತರಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,40,91,906ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ, ಭಾರತದ ಚೇತರಿಕೆ ದರವು ಶೇಕಡಾ 98.76 ರಷ್ಟಿದೆ.

ಭಾರತದ ದೈನಂದಿನ ಪಾಸಿಟಿವಿಟಿ ದರವು ಶೇಕಡಾ 1.52 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರವು ಪ್ರಸ್ತುತ ಶೇಕಡಾ 0.95 ರಷ್ಟಿದೆ ಎಂದು ವರದಿಯಾಗಿದೆ. ಇದೇ ಅವಧಿಯಲ್ಲಿ, ದೇಶಾದ್ಯಂತ ಒಟ್ಟು 87,905 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದು ಒಟ್ಟಾರೆ ಸಂಖ್ಯೆಯನ್ನು 90.01 ಕೋಟಿಗೆ ಹೆಚ್ಚಿಸಿದೆ.

ಸೋಮವಾರ ಬೆಳಿಗ್ಗೆಯವರೆಗೆ, ಭಾರತದ ಕೋವಿಡ್ -19 ಲಸಿಕೆ ವ್ಯಾಪ್ತಿಯು 219.56 ಕೋಟಿಯನ್ನು ಮೀರಿದೆ.

ಹದಿಹರೆಯದವರಿಗೆ  ವಯೋಮಾನದವರಿಗೆ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾದಾಗಿನಿಂದ 4.12 ಕೋಟಿಗೂ ಹೆಚ್ಚು ಕೋವಿಡ್ -19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.

Ashika S

Recent Posts

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

2 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

12 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

33 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

57 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

2 hours ago