ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 16,135 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 24 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,25,223 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,135 ಹೊಸ ಪ್ರಕರಣಗಳು, 13,958 ಚೇತರಿಕೆಗಳು ಮತ್ತು 24 ಸಾವುಗಳು ವರದಿಯಾಗಿವೆ.