News Karnataka Kannada
Saturday, May 11 2024
ದೆಹಲಿ

ನವದೆಹಲಿ: ಶಿಕ್ಷಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
Photo Credit : Pixabay

ನವದೆಹಲಿ: ದೆಹಲಿಯ ನ್ಯೂ ಅಶೋಕ್ ನಗರ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಕ್ರೀಡಾ ಶಿಕ್ಷಕರೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ನ್ಯೂ ಅಶೋಕ್ ನಗರ ಪೊಲೀಸ್ ಠಾಣೆಗೆ ಘಟನೆಯ ಬಗ್ಗೆ ಕರೆ ಬಂದಿದ್ದು, ನಂತರ ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ, ಅಲ್ಲಿ ಸಂತ್ರಸ್ತೆಯ ಪೋಷಕರು ಸುಮಾರು 4-5 ದಿನಗಳ ಹಿಂದೆ ಕ್ರೀಡಾ ಶಿಕ್ಷಕರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ  ಎಂದು ಅಧಿಕಾರಿ ಹೇಳಿದರು.

ಸಂತ್ರಸ್ತೆಯ ಕೌನ್ಸೆಲಿಂಗ್ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಐಪಿಸಿಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು