ದೆಹಲಿ

ನವದೆಹಲಿ: ಚಲಿಸುತ್ತಿದ್ದ ರೈಲಿನ ಮುಂದೆ ಇಬ್ಬರು ಮಕ್ಕಳೊಂದಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ನವದೆಹಲಿ: ಇಬ್ಬರು ಮಕ್ಕಳೊಂದಿಗೆ ಮಂಗಳವಾರ ಮಧ್ಯಾಹ್ನ 2.13ರ ಸುಮಾರಿಗೆ ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ಹೋಲಂಬಿ ಕಲನ್ ರೈಲು ನಿಲ್ದಾಣದಲ್ಲಿ ನಡೆದಿದೆ. ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯ ವಯಸ್ಸು 30ರ ಆಸುಪಾಸಿನಲ್ಲಿದ್ದು, ಮಕ್ಕಳು 5 ಮತ್ತು 10 ವರ್ಷದವರಾಗಿದ್ದಾರೆ. ‘ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನಮಗೆ ರೈಲ್ವೆ ಭದ್ರತಾ ನಿಯಂತ್ರಣ ಕೊಠಡಿಯಿಂದ ಕರೆ ಬಂದಿತ್ತು. ತನಿಖಾಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿದ್ದೆವು. ಹಳಿ ಮೇಲೆ ಒಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ’ ಎಂದು ರೈಲ್ವೆ ಡಿಸಿಪಿ ಹರೇಂದರ್ ಕೆ ಸಿಂಗ್ ತಿಳಿಸಿದ್ದಾರೆ.

ತಾಯಿ ಮತ್ತು ಮಕ್ಕಳು ಅಮೃತಸರ ಇಂಟರ್‌ಸಿಟಿ ರೈಲಿನ ಮುಂಭಾಗ ಜಿಗಿದಿದ್ದಾರೆ. ರೈಲು ಅವರ ಮೇಲೆ ಹರಿದಿದೆ. ಅವರ ಗುರುತು ಪತ್ತೆಮಾಡುವ ಪ್ರಯತ್ನ ನಡೆದಿದೆ ಎಂದು ಅವರು ತಿಳಿಸಿದ್ದಾರೆ.’ಮೃತದೇಹಗಳನ್ನು ಸಬ್ಜಿ ಮಂಡಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ’ಎಂದು ಸಿಂಗ್ ತಿಳಿಸಿದ್ದಾರೆ.

 

Gayathri SG

Recent Posts

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

4 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

13 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

33 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

43 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 hours ago