ನವದೆಹಲಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಎಐಸಿಸಿ ಚುನಾವಣಾ ಸಮಿತಿ ಸಭೆ ಒಪ್ಪಿಗೆ ಸೂಚಿಸಿದೆ.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿನಯ್ ಕುಲಕರ್ಣಿ, ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ಇದೇ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ವಿನಯ್ ಕುಲಕರ್ಣಿ ಇಂದು ದೆಹಲಿಗೆ ತೆರಳಿದ್ದರು. ಇದೀಗ ಕಾಂಗ್ರೆಸ್ ಸ್ಟೀನಿಂಗ್ ಕಮಿಟಿ ಸಭೆಯಲ್ಲಿ ವಿನಯ್ ಕುಲಕರ್ಣಿ ಸಿಎಂ ಬೊಮ್ಮಾಯಿ ವಿರುದ್ಧವೇ ಸ್ಪರ್ಧೆಗೆ ಸಮ್ಮತಿ ಸೂಚಿಸಲಾಗಿದೆ.