News Karnataka Kannada
Thursday, May 09 2024
ದೆಹಲಿ

ನವದೆಹಲಿ: ಎಎಪಿ ಸರ್ಕಾರದ ಹೊಸ ಮದ್ಯ ನೀತಿ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ  ಮಹಿಳಾ ಕಾಂಗ್ರೆಸ್ ಘಟಕ  ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತಲ್ಲದೆ  ನಗರದ  ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಪಚ್ಚಪ್ಪ ವೃತ್ತಕ್ಕೆ ತೆರಳಿ ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರಲ್ಲದೆ, ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು. ಪ್ರಜ್ವಲ್‌ ಶಿಕ್ಷೆಯಾಗಬೇಕು ಎಂದು ಘೋಷಣೆ ಕೂಗಿದರು.
Photo Credit : Wikimedia

ನವದೆಹಲಿ: ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಹೊರಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಿತ್ತಿಪತ್ರಗಳು ಮತ್ತು ಪಕ್ಷದ ಬಾವುಟಗಳನ್ನು ಹಿಡಿದು ದೆಹಲಿ ಸರ್ಕಾರ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಯನ್ನು ಭಾರಿ ಪ್ರಮಾಣದಲ್ಲಿ ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರು ಸಿಸೋಡಿಯಾ ಅವರ ನಿವಾಸದ ಕಡೆಗೆ ಹೋಗುವುದನ್ನು ತಡೆಯಲು ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಆದರೆ ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತುಳಿದು ಅದನ್ನು ದಾಟಲು ಪ್ರಯತ್ನಿಸಿದಾಗ,  ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಹೊಸ ಭ್ರಷ್ಟ ಮದ್ಯ ನೀತಿಯನ್ನು ತರಲು ಮದ್ಯ ಮಾಫಿಯಾದೊಂದಿಗೆ ಶಾಮೀಲಾಗಿರುವ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಸರ್ಕಾರ ಕೂಡಲೇ ವಜಾಗೊಳಿಸಬೇಕು” ಎಂದು ಬಂಧನಕ್ಕೊಳಗಾಗಿರುವ ನಾಯಕರಲ್ಲಿ ಒಬ್ಬರು ಹೇಳಿದ್ದಾರೆ.

ದೆಹಲಿ ಅಬಕಾರಿ ಕಾಯ್ದೆ 2009 ರ ಉಲ್ಲಂಘನೆಯನ್ನು ಮುಖ್ಯ ಕಾರ್ಯದರ್ಶಿಯ ಇತ್ತೀಚಿನ ವರದಿಯು ದೃಢಪಡಿಸಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು  ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.

ಸಿಸೋಡಿಯಾ ಅವರು ಮದ್ಯ ಪರವಾನಗಿದಾರರಿಗೆ ಅನಗತ್ಯ ಪ್ರಯೋಜನಗಳನ್ನು ಒದಗಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಪಂಜಾಬ್ ಚುನಾವಣೆಯ ಸಮಯದಲ್ಲಿ ಎಎಪಿ ಈ ಹಣವನ್ನು ಬಳಸಿರಬಹುದು ಎಂದು ಆರೋಪಿಸಲಾಗಿದೆ..

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು