Categories: ದೆಹಲಿ

ನವದೆಹಲಿ: ಸೈಬರ್‌ ತಂತ್ರಾಂಶ ನಿಪುಣ ಪ್ರವೀಣ್‌ ಸೂದ್‌ ಸಿಬಿಐ ಮಹಾನಿರ್ದೇಶಕರಾಗಿ ಅಧಿಕಾರ ಸ್ವೀಕಾರ

ನವದೆಹಲಿ: ಈ ಹಿಂದೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಪ್ರವೀಣ್ ಸೂದ್ ಸಿಬಿಐ ಹೊಸ ನಿರ್ದೇಶಕರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು. 1986ರ ಬ್ಯಾಚ್‌ನ ಕರ್ನಾಟಕ ಕೇಡರ್ ಅಧಿಕಾರಿ ಸೂದ್ ಅವರು ಗುರುವಾರ ಜೈಸ್ವಾಲ್ ಅವರ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಸೂದ್ ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಕಾಲದ ಅವಧಿ ಹೊಂದಿದ್ದಾರೆ. ಆದರೆ ಇದನ್ನು ಐದು ವರ್ಷಗಳ ಕಾಲ ವಿಸ್ತರಿಸಲು ಅವಕಾಶವಿದೆ. ಸೂದ್ ಅವರ ಹೆಸರನ್ನು ಅಂತಿಮಗೊಳಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಇದ್ದರು. ಸೂದ್ ಹೆಸರಲ್ಲದೆ ಮಧ್ಯಪ್ರದೇಶದ ಡಿಜಿಪಿ ಸುಧೀರ್ ಕುಮಾರ್ ಸಕ್ಸೇನಾ, ಗೃಹ ರಕ್ಷಕ ದಳದ ಮಹಾನಿರ್ದೇಶಕ ತಾಜ್ ಹಾಸನ್ ಅವರ ಹೆಸರು ಶಾರ್ಟ್‌ಲಿಸ್ಟ್‌ ಆಗಿತ್ತು.

ಸೂದ್ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಮುಖ ಸೈಬರ್ ಕ್ರೈಮ್ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಅವರ ಪರಿಣತಿ ಹೊಂದಿದ್ದಾರೆ. ಕರ್ನಾಟಕದಲ್ಲಿ, ಸೈಬರ್ ವಂಚನೆ ಎದುರಿಸಲು ಸೂದ್ ಅಪರಾಧ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಜಾರಿಗೆ ತಂದ್ದರು. ಅಲ್ಲದೆ ರಾಷ್ಟ್ರಪತಿಗಳ ಪೊಲೀಸ್ ಪದಕದ ಗೌರವಕ್ಕೆ ಪಾತ್ರರಾಗಿದ್ದು, ಮಾರಿಷಸ್ ಸರ್ಕಾರದ ಪೊಲೀಸ್ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು. ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಸಿಬಿಐ ನಿರ್ದೇಶಕರ ಹುದ್ದೆಗೆ ಪರಿಗಣಿಸಲು ಮೂರು ಹಿರಿಯ ಬ್ಯಾಚ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ನಂತರ ಹೆಸರುಗಳನ್ನು ಪ್ರಧಾನ ಮಂತ್ರಿ ನೇತೃತ್ವದ ಕ್ಯಾಬಿನೆಟ್‌ನ ಇಬ್ಬರು ಸದಸ್ಯರ ನೇಮಕಾತಿ ಸಮಿತಿಗೆ ಕಳುಹಿಸಲಾಗುತ್ತದೆ, ಅದು ಒಬ್ಬರನ್ನು ಆಯ್ಕೆ ಮಾಡುತ್ತದೆ. ಗೃಹ ಸಚಿವ ಅಮಿತ್ ಶಾ ಅವರು ಸಮಿತಿಯ ಎರಡನೇ ಸದಸ್ಯರಾಗಿದ್ದಾರೆ.

Umesha HS

Recent Posts

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

4 mins ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

34 mins ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

2 hours ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

2 hours ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

2 hours ago

ಪ್ರಜ್ವಲ್ ಪ್ರಕರಣ ಕಾಂಗ್ರೆಸ್ ನಿಂದ ರಾಜಕೀಯ: ಅರವಿಂದ ಲಿಂಬಾವಳಿ ಆರೋಪ

ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.

3 hours ago