Categories: ದೆಹಲಿ

ಹೊಸದಿಲ್ಲಿ: ಆರ್‌ಎಸ್‌ಎಸ್‌ ವಿರುದ್ಧ ಟೀಕೆ, ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ

ಹೊಸದಿಲ್ಲಿ: ಮೋದಿ ಕುಲನಾಮದವರೆಲ್ಲ ಕಳ್ಳರೆಂದು ಹೇಳಿ ಇತ್ತೀಚೆಗಷ್ಟೇ, ಸೂರತ್ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಭಾರತ್ ಜೋಡೊ ಯಾತ್ರೆಯ ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿದ್ದರು. ಆರ್‌ಎಸ್‌ಎಸ್‌ನವರು ಈಗ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾರಿ ಹಿಡಿದು ಶಾಖಾಗಳಲ್ಲಿದ್ದಾರೆ. ಭಾರತದ 2-3 ಬಿಲಿಯನೇರ್‌ಗಳು ಕೌರವರ ಜತೆ ನಿಂತಿದ್ದಾರೆ ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಕೌರವರು ಟೀಕೆ ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಆರ್‌ಎಸ್‌ಎಸ್‌ ಸ್ವಯಂಸೇವಕ ಕಮಲ್ ಭಡೋರಿಯಾ ಎಂಬವರು ದೂರು ಸಲ್ಲಿಸಿದ್ದಾರೆ. ನ್ಯಾಯಾಲಯ ಏ.12 ರಂದು ಈ ದೂರಿನ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಭಾರತೀಯ ದಂಡ ಸಂಹಿತೆಯ 499 ಮತ್ತು 500 ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದೆ.

Ashika S

Recent Posts

ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್ : ಐವಿಎಫ್‌ ಈಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯ

ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…

15 mins ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…

46 mins ago

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

1 hour ago

ಇಂದಿನ ರಾಶಿ ಫಲ : ಈ ರಾಶಿಯವರಿಗೆ ದಿಢೀರ್ ಪ್ರಯಾಣ ಸಾಧ್ಯತೆ

ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…

1 hour ago

ಇಂದು 2ನೇ ಹಂತದ ಮತದಾನ : ಮತದಾರರ ಪಟ್ಟಿಯ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…

1 hour ago

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

9 hours ago