Categories: ದೆಹಲಿ

ನವದೆಹಲಿ: ಒಡಿಶಾ ರೈಲು ದುರಂತಕ್ಕೆ ಮೂಲ ಕಾರಣವೇನು ಗೊತ್ತ, ನೋಡಿ ಇಂಚಿಂಚು ಮಾಹಿತಿ

ನವದೆಹಲಿ: ಒಡಿಶಾದಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಭೀಕರ ದುರಂತದಲ್ಲಿ ಸಾವಿಗೀಡಾಗುತ್ತಿರುವ ಪ್ರಯಾಣಿಕರ ಸಂಖ್ಯೆ ಇನ್ನೂ ಹೆಚ್ಚುತ್ತಿದೆ.

ಸದ್ಯ 290 ಅಧಿಕ ಮಂದಿ ಸಾವಿಗೀಡಾಗಿದ್ದು 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ನೋವಿನ ನಡುವೆಯೇ ಅಪಘಾತಕ್ಕೆ ಕಾರಣ ಏನು ಅನ್ನುವುದರ ಬಗ್ಗೆ ತನಿಖೆ ನಡೆಯುತ್ತಿದ್ದು ಓರ್ವ ಮಾಡಿದ ತಪ್ಪಿಗೆ ಇಷ್ಟು ದೊಡ್ಡ ದುರಂತ ಸಂಭವಿಸಿ ಬಿಟ್ಟಿದೆ ಅನ್ನುವುದು ಪ್ರಾಥಮಿಕ ತನಿಖೆಯಿಂದ ವರದಿಯಾಗಿದೆ.

ಹೌದು, ಅವಘಡ ನಡೆದ ಜಾಗದಲ್ಲಿ ನಾಲ್ಕು ರೈಲ್ವೆ ಹಳಿಗಳು ಇದ್ದವು. ಮೊದಲನೆಯ ಹಳಿ ಮೈನ್‌ಲೈನ್‌, ಎರಡನೇ ಹಳಿ ಮೈನ್‌ಲೈನ್‌. ಈ ಎರಡೂ ಹಳಿಗಳಲ್ಲಿ ಪ್ರಯಾಣಿಕರ ರೈಲು ಹಾದು ಹೋಗುತ್ತದೆ. ಮತ್ತೆರಡು ಹಳಿಯನ್ನು ಲೂಪ್ ಲೈನ್ ಎಂದು ಕರೆಯಲಾಗುತ್ತದೆ. ಈ ಹಳಿಯು ಗೂಡ್ಸ್‌ ರೈಲು ನಿಂತುಕೊಳ್ಳಲೆಂದು ಮಾಡಲಾಗಿರುತ್ತದೆ. ಈ ಹಳಿಯ ಮೇಲೆ ಗೂಡ್ಸ್‌ ರೈಲೊಂದು ನಿಂತುಕೊಂಡಿತ್ತು. ಈ ರೈಲಿನ ಪೂರ್ಣ ಭೋಗಿಗಳು ಮೈನ್‌ಲೈನ್‌ನಿಂದ ಕ್ಲೀಯರ್ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಹಾಯಕ ಸ್ಟೇಷನ್ ಮಾಸ್ಟರ್ ಸಿಗ್ನಲ್ ಅನ್ನು ಆಫ್‌ ಮಾಡುತ್ತಾನೆ. ಇದರಿಂದಾಗಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಪಶ್ಚಿಮಬಂಗಾಳದಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಮುಖ್ಯ ಲೈನ್‌ನಲ್ಲಿ ಏನೋ ಸಮಸ್ಯೆ ಆಗಿದೆಯೆಂದು ಭಾವಿಸಿ ಗೂಡ್ಸ್‌ ರೈಲು ನಿಂತಿದ್ದ ಲೂಪ್ ಲೈನ್‌ ಕಡೆಗೆ ತಿರುಗುತ್ತದೆ. ಇದರಿಂದಾಗಿ ನೇರವಾಗಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆಯುತ್ತದೆ. ಇದೇ ಸಮಯದಲ್ಲಿ ಮತ್ತೊಂದು ಮೈನ್‌ ಟ್ರ್ಯಾಕ್‌ನಲ್ಲಿ ಬೆಂಗಳೂರಿನಿಂದ ಪಶ್ಚಿಮ ಬಂಗಾಳದತ್ತ ಹೊರಟಿದ್ದ ಯಶವಂತಪುರ ಹೌರಾ ಎಕ್ಸ್‌ಪ್ರೆಸ್ ರೈಲು ಗಂಟೆಗೆ 170 ಕಿ.ಮೀ. ವೇಗದಲ್ಲಿ ಚಲಿಸುತ್ತಿತ್ತು. ಅದು ಇನ್ನೇನು ಪಾಸಾಗಬೇಕು ಅನ್ನುವಷ್ಟರಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಟ್ರ್ಯಾಕ್ ತಪ್ಪಿ ಯಶವಂತಪುರ ಹೌರಾ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತಿದ್ದ ಟ್ರ್ಯಾಕ್‌ ಗೆ ಬಂದು ಬೀಳುತ್ತವೆ. ಇದರಿಂದಾಗಿ ಯಶವಂತಪುರ ಹೌರಾ ಎಕ್ಸ್‌ಪ್ರೆಸ್ ರೈಲಿನ ಹಿಂದಿನ ನಾಲ್ಕು ಬೋಗಿಗಳು ನಜ್ಜುಗುಜ್ಜಾಗುತ್ತವೆ. ಹೀಗಾಗಿ ಸಾವಿನ ಪ್ರಮಾಣ ಹೆಚ್ಚಾಗಿದೆ ಅನ್ನುವುದು ಬೆಳಕಿಗೆ ಬಂದಿದೆ. ಒಟ್ಟಿನಲ್ಲಿ ಸಹಾಯಕ ಸ್ಟೇಷನ್ ಮಾಸ್ಟರ್ ಸ್ವಲ್ಪ ಎಚ್ಚೆತ್ತುಕೊಂಡಿದ್ದರೆ ಸಂಭವಿಸಬಹುದಾಗಿದ್ದ ಭಾರಿ ದುರಂತವನ್ನು ತಪ್ಪಿಸಬಹುದಾಗಿತ್ತು.

Ashika S

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

16 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

24 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

28 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

39 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

42 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

43 mins ago