ಹೊಸದಿಲ್ಲಿ: ದಿಲ್ಲಿ ಪೊಲೀಸರ ಅಪರಾಧ ವಿಭಾಗವು ಸರಣಿ ಕಾರ್ಯಾಚರಣೆಗಳಲ್ಲಿ ನಾಲ್ವರನ್ನು ಬಂಧಿಸಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 1 ಕೋಟಿ ರೂ.ಮೌಲ್ಯದ 930 ಗ್ರಾಂ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ನಿರ್ದಿಷ್ಟ ಮಾಹಿತಿಗಳನ್ನು ಪಡೆದ ನಂತರ, ಸುಲ್ತಾನ್ಪುರಿ ಪ್ರದೇಶದಲ್ಲಿ ದಾಳಿ ನಡೆಸಲಾಯಿತು ರಾಕೇಶ್ ಸಿಂಗ್ (46) ಎಂಬ ಮಾದಕವಸ್ತು ಕಳ್ಳಸಾಗಣೆದಾರನನ್ನು ಬಂಧಿಸಲಾಗಿದೆ.
ಆತನ ಮನೆ ಶೋಧದ ವೇಳೆ 258 ಗ್ರಾಂ ಹೆರಾಯಿನ್, 4.2 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ (ಅಪರಾಧ) ರವೀಂದ್ರ ಸಿಂಗ್ ಯಾದವ್ ತಿಳಿಸಿದ್ದಾರೆ.
ಎರಡನೇ ಕಾರ್ಯಾಚರಣೆಯಲ್ಲಿ, ದೆಹಲಿ ಪೊಲೀಸರು ಉತ್ತರ ಪ್ರದೇಶದ ಬದೌನ್ ಮೂಲದ ಹೆರಾಯಿನ್ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಸಣ್ಣ ಕವರ್ಗಳಲ್ಲಿ ಒಟ್ಟು 262 ಗ್ರಾಂ ಹೆರಾಯಿನ್, ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಪಡಿಸಿಕೊಳ್ಳಲಾಗಿದೆ. “ದಾಳಿಯ ಸಮಯದಲ್ಲಿ, ಆರೋಪಿ ಫೋನ್ ಅನ್ನು ನೆಲಕ್ಕೆ ಎಸೆದು ಪುರಾವೆಗಳನ್ನು ನಾಶಪಡಿಸಲು ಯತ್ನಿಸಿದ್ದ” ಎಂದು ವಿಶೇಷ ಸಿಪಿ ಹೇಳಿದರು.
ಮತ್ತೊಂದು ಕಾರ್ಯಾಚರಣೆಯಲ್ಲಿ, ವಜೀರಾಬಾದ್ ಫ್ಲೈಓವರ್ ಅಡಿಯಲ್ಲಿ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ 410 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.