ನವದೆಹಲಿ: ನೈಜೀರಿಯಾದ ಮಹಿಳೆಯೊಬ್ಬಳನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ಕೋಟಿ ರೂ.ಮೌಲ್ಯದ ಹೆರಾಯಿನ್ ನೊಂದಿಗೆ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಹಿಳೆ ಸೋಮವಾರ ಐಜಿಐ ವಿಮಾನ ನಿಲ್ದಾಣಕ್ಕೆ ಬಂದಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.
“ನೈಜೀರಿಯಾ ಪ್ರಜೆಯನ್ನು ಅನುಮಾನದ ಮೇಲೆ ತಡೆಹಿಡಿಯಲಾಗಿದ್ದು, ನಾವು ಅವಳ ಚೀಲದಿಂದ ನಾಲ್ಕು ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದೇವೆ. ಎಂದರು.
ಮಹಿಳೆಯನ್ನು ಎನ್ ಡಿಪಿಎಸ್ ಕಾಯ್ದೆಯ ಸೆಕ್ಷನ್ 43 (ಬಿ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ.