News Karnataka Kannada
Thursday, May 02 2024
ದೆಹಲಿ

ನವದೆಹಲಿ: ತ್ರಿವಳಿ ರೈಲುಗಳ ಅಪಘಾತ ಸ್ಥಳಕ್ಕೆ ಪ್ರಧಾನಿ ಭೇಟಿ ಸಾಧ್ಯತೆ

Number of Jan Dhan accounts crosses 50 crore mark: PM
Photo Credit : IANS

ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ತ್ರಿವಳಿ ರೈಲುಗಳ ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.

ಪ್ರಧಾನ ಮಂತ್ರಿ ಕಚೇರಿ ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಮೊದಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಬಳಿಕ ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಗೋವಾದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಬೇಕಿತ್ತು. ಆದರೆ ಒಡಿಶಾದಲ್ಲಿ ನಡೆದ ದುರಂತ ಘಟನೆ ಹಿನ್ನಲೆಯಲ್ಲಿ ವಂದೇ ಭಾರತ್ ಲೋಕಾರ್ಪಣೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.

ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಸಭೆ ಬಳಿಕ ಒಡಿಶಾಗೆ ತೆರಳಿ ಘಟನಾ ಸ್ಥಳ ಪರಿಶೀಲಿಸಿ ಬಳಿಕ ಕಟಕ್​ನ ಆಸ್ಪತ್ರೆಗೆ ಪ್ರಧಾನಿ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು