ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಭಾಗವಹಿಸಿದ್ದರು.
ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುತ್ತಿದ್ದು, ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಮತ್ತು ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕೂಡ ಸಭೆಯಲ್ಲಿ ಹಾಜರಿದ್ದರು.
ಕಳೆದ ವರ್ಷ ಡಿಸೆಂಬರ್ ನಲ್ಲಿ ಪ್ರಧಾನಿ ಮೋದಿ ಅವರು ವಾರಣಾಸಿಯಲ್ಲಿ ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಇದೇ ರೀತಿಯ ಸಭೆ ನಡೆಸಿದ್ದರು.
ಬಿಜೆಪಿ ಆಡಳಿತವಿರುವ ರಾಜ್ಯ ಸರ್ಕಾರದ ಕಾಮಗಾರಿಗಳನ್ನು ಪರಿಶೀಲಿಸಲಾಗುವುದು ಮತ್ತು ಸಾರ್ವಜನಿಕ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟು ಬಲಪಡಿಸಲು ಸಲಹೆಗಳನ್ನು ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.