News Karnataka Kannada
Saturday, April 27 2024
ದೆಹಲಿ

ನವದೆಹಲಿ: ಪ್ರಿಯಾಂಕಾ ಗಾಂಧಿಗೆ ಎರಡನೇ ಬಾರಿ ಕೋವಿಡ್ ಧೃಢ

Priyanka Gandhi Vadra attacks Scindia  
Photo Credit : Wikimedia

ನವದೆಹಲಿ: ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೋವಿಡ್ ಪಾಸಿಟಿವ್ ಬಂದಿದೆ (ಮತ್ತೆ!) ಇಂದು. ಮನೆಯಲ್ಲಿಯೇ ಐಸೋಲೇಟ್ ಆಗುತ್ತೇನೆ ಮತ್ತು ಎಲ್ಲಾ ಪ್ರೋಟೋಕಾಲ್ ಗಳನ್ನು ಅನುಸರಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜೂನ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮಂಗಳವಾರ ಸಂಜೆ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

“ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕಾಳಜಿ ವಹಿಸುವಂತೆ ನಾನು ವಿನಂತಿಸುತ್ತೇನೆ” ಎಂದು ಖರ್ಗೆ ಟ್ವೀಟ್ ಮಾಡಿದ್ದರು.

ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,047 ಹೊಸ ಕೋವಿಡ್ ಸೋಂಕು ವರದಿಯಾಗಿದ್ದು, 54 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು