ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್ ನ್ಯಾಯಾಲಯ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿತ್ತು.