News Karnataka Kannada
Thursday, April 25 2024
Cricket
ದೆಹಲಿ

ಶೀಲಾ ದೀಕ್ಷಿತ್‌ ನಿವಾಸಕ್ಕೆ ರಾಹುಲ್‌ ಗಾಂಧಿ ಶಿಫ್ಟ್‌

Conspiracy in Congress to end Rahul Gandhi's political career
Photo Credit : News Kannada

ನವದೆಹಲಿ: ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಏಪ್ರಿಲ್‌ 22ರಂದು ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದು, ಇದೀಗ ದೆಹಲಿ ಮಾಜಿ ಸಿಎಂ ದಿ. ಶೀಲಾ ದೀಕ್ಷಿತ್‌ ನಿವಾಸಕ್ಕೆ ಶಿಫ್ಟ್‌ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ರಾಹುಲ್ ಗಾಂಧಿ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕಿಯಾಗಿದ್ದ ಶೀಲಾ ದೀಕ್ಷಿತ್ ಅವರ ದಕ್ಷಿಣ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ನಿವಾಸಕ್ಕೆ ತೆರಳುವ ಸಾಧ್ಯತೆಯಿದೆ. ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್‌ ಅವರ ಪುತ್ರ ಸಂದೀಪ್‌ ದೀಕ್ಷಿತ್‌ ಅವರು ರಾಹುಲ್‌ ಗಾಂಧಿಗಾಗಿ ತಮ್ಮ ನಿವಾಸವನ್ನು ಖಾಲಿ ಮಾಡಿದ್ದಾರೆ.

ಅದೇ ಜಾಗದಲ್ಲಿ ಬಾಡಿಗೆ ಆಧಾರದಲ್ಲಿ ರಾಹುಲ್‌ ಮನೆ ಪಡೆದುಕೊಳ್ಳಲಿದ್ದಾರೆ. ದೆಹಲಿಯ 12 ತುಘಲಕ್ ಲೇನ್‌ನಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ ನಂತರ, ರಾಹುಲ್ ಗಾಂಧಿ ಅವರು ತಮ್ಮ ತಾಯಿ ಮತ್ತು ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರೊಂದಿಗೆ 10 ಜನಪಥ್‌ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಶೀಲಾ ದೀಕ್ಷಿತ್‌ ಅವರ ಮನೆ ಮೂರು ಬೆಡ್‌ ರೂಂ ಹೊಂದಿದ್ದು, ದೀಕ್ಷಿತ್‌ ತಮ್ಮ ಜೀವನದ ಕೊನೆ ದಿನಗಳನ್ನು ಅಲ್ಲಿಯೇ ಕಳೆದಿದ್ದರು. ಶೀಲಾ ದೀಕ್ಷಿತ್ ಜುಲೈ 20, 2019 ರಂದು ನಿಧನರಾಗಿದ್ದರು.

ಅಲ್ಲದೆ 2014 ರ ಸೆಪ್ಟೆಂಬರ್‌ನಲ್ಲಿ ಕೇರಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಇದೇ ಫ್ಲ್ಯಾಟ್‌ ನಲ್ಲಿ ವಾಸವಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು