News Karnataka Kannada
Friday, May 03 2024
ದೆಹಲಿ

ಜೈಲು ಶಿಕ್ಷೆ ವಿರುದ್ಧ ನಾಳೆ ರಾಹುಲ್‌ ಗಾಂಧಿ ಮೇಲ್ಮನವಿ, ಶಿಕ್ಷೆ ರದ್ದುಪಡಿಸುವಂತೆ ಕೋರಿಕೆ

Raga introduces a new member of the family by giving a gift to her mother
Photo Credit : Facebook

ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಸಂಸತ್ತಿನಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಪರಾಧ ಮತ್ತು ಶಿಕ್ಷೆಯ ವಿರುದ್ಧ ಸೋಮವಾರ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಅವರು ತಮ್ಮ ಅರ್ಜಿಯಲ್ಲಿ ಸೆಷನ್ಸ್ ನ್ಯಾಯಾಲಯವನ್ನು ಕೋಡಲಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಶಿಕ್ಷೆಯನ್ನು 30 ದಿನ ಶಿಕ್ಷೆಯನ್ನು ತಡೆಹಿಡಿಯಲಾಗಿದೆ.

ರಾಹುಲ್ ಗಾಂಧಿಯವರ ಶಿಕ್ಷೆಯನ್ನು ಮೇಲಿನ ನ್ಯಾಯಾಲಯವು ತಡೆಹಿಡಿಯದ ಹೊರತು ಸಂಸತ್‌ ಸದಸ್ಯತ್ವ ಪುನರೂರ್ಜಿತವಾಗುವುದಿಲ್ಲ. ಶಿಕ್ಷೆಯಾದರೆ ಎಂಟು ವರ್ಷ ಚುನಾವಣೆಗೆ ಸ್ಪರ್ಧಿಸಲು ಅವಕಾಶವೂ ಸಿಗುವುದಿಲ್ಲ. ಹೀಗಾಗಿ ರಾಹಲ್ ಗಾಂಧಿ ನಾಳೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪು ಪ್ರಶ್ನಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು