News Karnataka Kannada
Monday, April 29 2024
ದೆಹಲಿ

ನವದೆಹಲಿ: ಸಂಪುಟ ವಿಸ್ತರಣೆ ಕುರಿತು ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಯಲಿರುವ ಶಿಂಧೆ

The Maharashtra Legislative Assembly on Friday passed a resolution expressing solidarity with Marathi-speaking people.
Photo Credit : IANS

ನವದೆಹಲಿ: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಶನಿವಾರ ದೆಹಲಿ ತಲುಪಿದ ನಂತರ, ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ಭೇಟಿ ನೀಡುತ್ತಿದ್ದೇನೆ ಎಂದು ಶಿಂಧೆ ಹೇಳಿದರು.

ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿ 35 ದಿನಗಳು ಕಳೆದರೂ ಸಂಪುಟ ವಿಸ್ತರಣೆಯಾಗಿಲ್ಲ.

ಆದಾಗ್ಯೂ ಮೂಲಗಳ ಪ್ರಕಾರ, ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈಗಾಗಲೇ ರಾಜಧಾನಿಯಲ್ಲಿದ್ದು, ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿಯ ಪ್ರಮುಖರೊಂದಿಗೆ ಚರ್ಚಿಸಬಹುದು.

ಸಚಿವರ ಪಟ್ಟಿಯನ್ನು ತಯಾರಿಸಲಾಗಿದೆ ಮತ್ತು ಇಲಾಖೆಗಳನ್ನು ಹಂಚಿಕೆ ಮಾಡಲು ಬಿಜೆಪಿ ಹೈಕಮಾಂಡ್ ನ ಅನುಮೋದನೆ ಪಡೆಯಬೇಕಾಗಿದೆ ಎಂದು ಹೇಳಲಾಗುತ್ತಿದೆ.

ಜೂನ್ 30ರಂದು ಶಿಂಧೆ ನೇತೃತ್ವದಲ್ಲಿ ಶಿವಸೇನೆಯ ಬಂಡಾಯ ಶಾಸಕರು ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ. ಆದರೆ ಅವರು ಇಲ್ಲಿಯವರೆಗೆ ಸಚಿವ ಸಂಪುಟವನ್ನು ವಿಸ್ತರಿಸದ ಕಾರಣ ಅವರು ನಿರಂತರವಾಗಿ ವಿರೋಧದ ಟೀಕೆಗೆ ಒಳಗಾಗುತ್ತಿದ್ದಾರೆ. ಬಂಡಾಯ ಶಾಸಕರ ಸದಸ್ಯತ್ವದ ವಿಷಯವೂ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇದೆ.

ಆಗಸ್ಟ್ ೧೫ ರೊಳಗೆ ಹೊಸ ಸಚಿವ ಸಂಪುಟವನ್ನು ರಚಿಸಬಹುದು ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು