ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಶಿಷ್ಟಾಚಾರದ ಪ್ರಕಾರ ಐಸೋಲೇಷನ್ ನಲ್ಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಸರ್ಕಾರದ ಶಿಷ್ಟಾಚಾರದ ಪ್ರಕಾರ ಅವರು ಪ್ರತ್ಯೇಕವಾಗಿದ್ದಾರೆ. ಎಂದು ಪಕ್ಷದ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಬುಧವಾರ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಘೋಷಿಸಿದರು.
ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಭಾರತವು ಶನಿವಾರ 15,815 ಹೊಸ ಕೋವಿಡ್ ಸೋಂಕುಗಳು ಮತ್ತು 68 ಸಾವುಗಳನ್ನು ವರದಿ ಮಾಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಶನಿವಾರದ ಅಂಕಿಅಂಶಗಳು ತಿಳಿಸಿವೆ.