Categories: ದೆಹಲಿ

ನವದೆಹಲಿ: ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಮತ್ತೆ ಕಲುಷಿತಗೊಂಡ ವಾತಾವರಣ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪಟಾಕಿ ಮಾರಾಟ ಮತ್ತು ಪಟಾಕಿ ಬಳಕೆಯನ್ನು ನಿಷೇಧಿಸಿದ್ದರೂ ಕೂಡಾ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ದೆಹಲಿಯ ವಾಯು ಗುಣಮಟ್ಟ ಪ್ರಮಾಣ ತೀವ್ರ ಕುಸಿದಿದೆ.

ವರದಿಯ ಪ್ರಕಾರ, ರಾಷ್ಟ್ರರಾಜಧಾನಿ ದೆಹಲಿ ಜಗತ್ತಿನ ಅತ್ಯಂತ ಕಲುಷಿತ ನಗರವಾಗಿದೆ. ಎರಡನೇ ಸ್ಥಾನ ಪಾಕಿಸ್ತಾನದ ಲಾಹೋರ್ ನದ್ದಾಗಿದೆ. ಸೋಮವಾರ ಪಟಾಕಿ ಸಿಡಿಸಿದ ಪರಿಣಾಮ 24ಗಂಟೆಯಲ್ಲಿ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ 312ಕ್ಕೆ ಕುಸಿದಿದ್ದು, ತೀವ್ರ ಕಲುಷಿತಗೊಂಡಿರುವುದಾಗಿ ವರದಿ ವಿವರಿಸಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದೆಹಲಿಯಲ್ಲಿ ಅಕ್ಟೋಬರ್ 27ರವರೆಗೆ ಹವಾಮಾನ ಗುಣಮಟ್ಟ ತೀವ್ರ ಕಲುಷಿತಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ ಬಗ್ಗೆ ನಿಷೇಧ ಹೇರಿದ್ದರೂ ಕೂಡಾ ಹಲವೆಡೆ ಭಾರೀ ಪ್ರಮಾಣದಲ್ಲಿ ಪಟಾಕಿ ಬಳಕೆ ಮಾಡಿರುವುದಾಗಿ ವರದಿ ತಿಳಿಸಿದೆ.

Sneha Gowda

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

2 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

2 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

3 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

3 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

3 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

4 hours ago